×
Ad

ಬೀದರ್ | ಪ್ರವಾಸಿ ಮಾರ್ಗದರ್ಶಿ ತರಬೇತಿಗಾಗಿ ಅರ್ಜಿ ಅಹ್ವಾನ

Update: 2025-08-24 17:47 IST

ಬೀದರ್ : ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಎಸ್ಸಿಎಸ್ಪಿ, ಟಿಎಸ್ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಗೆ 1 ತಿಂಗಳ ಪ್ರವಾಸಿ ಮಾರ್ಗದರ್ಶಿ ತರಬೇತಿಗಾಗಿ ಅರ್ಜಿ ಅಹ್ವಾನಿಸಲಾಗಿದೆ ಎಂದು ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೀದರ್ ಜಿಲ್ಲೆಗೆ ಪರಿಶಿಷ್ಟ ಜಾತಿಗೆ 13 ಮತ್ತು ಪರಿಶಿಷ್ಟ ಪಂಗಡಕ್ಕೆ 8 ಅಭ್ಯರ್ಥಿಗಳಿಗೆ ತರಬೇತಿ ನೀಡುವ ಗುರಿ ಇದ್ದು, ಪರಿಶಿಷ್ಟ ಜಾತಿಯ 5 ಮತ್ತು ಪರಿಶಿಷ್ಟ ಪಂಗಡದಲ್ಲಿ 6 ಗುರಿಗಳನ್ನು ಬಾಕಿ ಉಳಿದಿವೆ. ಬಾಕಿ ಉಳಿದಿರುವ ಪರಿಶಿಷ್ಟ ಜಾತಿಯ 5 ಮತ್ತು ಪರಿಶಿಷ್ಟ ಪಂಗಡದಲ್ಲಿ 6 ಗುರಿಗಳು ತಲುಪಲು ಅರ್ಜಿ ಕರೆಯಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಸಲ್ಲಿಸಬೇಕಾದ ದಾಖಲೆಗಳು : 10ನೇ ತರಗತಿಯ ಅಂಕಪಟ್ಟಿ ಪ್ರತಿ, ಪದವಿ ಪೂರ್ವ ಶಿಕ್ಷಣದ ಅಂಕಪಟ್ಟಿ ಪ್ರತಿ, ತಹಶಲ್ದಾರರಿಂದ ಪಡೆದ ಜಾತಿ ಆದಾಯ ಮತ್ತು ವಾಸಸ್ಥಳ ಪ್ರಮಾಣ ಪತ್ರ, ನಿರುದ್ಯೋಗ ಪ್ರಮಾಣ ಪತ್ರದ ಪ್ರತಿ, ಪಡಿತರ ಚೀಟಿ, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಬ್ಯಾಂಕ್ ಖಾತೆ ಪಾಸ್ ಪುಸ್ತಕ ಪ್ರತಿ ಹಾಗೂ ಅನುಭವ ಪ್ರಮಾಣ ಪತ್ರದ ಪ್ರತಿ.

ಆಸಕ್ತರು ಪ್ರವಾಸೋದ್ಯಮ ಇಲಾಖೆಯ ಕಚೇರಿಯಿಂದ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಆ.30 ರ ಒಳಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿರುವ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News