ಬೀದರ್ | ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
ಬೀದರ್ : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರವಾದ ಬೀದರ್ ನಲ್ಲಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶೈಕ್ಷಣಿಕ ವರ್ಷ 2025-26ರ ಜುಲೈ ಆವೃತ್ತಿಯಲ್ಲಿ ಪ್ರಥಮ ವರ್ಷಕ್ಕೆ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲೂ, ಬಿ.ಲಿಬ್.ಐ.ಎಸ್ಸಿ, ಎಂ.ಎ, ಎಂ.ಎಸ್.ಡಬ್ಲೂ, ಎಂ.ಕಾಮ್, ಎಂ.ಸಿ.ಎ, ಎಂ.ಲಿಬ್.ಐ.ಎಸ್ಸಿ, ಎಂ.ಎಸ್ಸಿ, ಎಂ.ಬಿ.ಎ ಮತ್ತು ಯು.ಜಿ, ಪಿ.ಜಿ ಹಾಗೂ ಡಿಪ್ಲೋಮಾ ಕೋರ್ಸ್ ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿಗಳಿಗೆ ಎರಡು ಶೈಕ್ಷಣಿಕ ಕಾರ್ಯಕ್ರಮಗಳನ್ನು ಏಕಕಾಲದಲ್ಲಿ ಅಧ್ಯಯನ ಮಾಡಲು ಅವಕಾಶವಿರುತ್ತದೆ. ಒಂದು ಭೌತಿಕ ಕ್ರಮದಲ್ಲಿ ಮತ್ತೊಂದು ದೂರ ಶಿಕ್ಷಣ ಕ್ರಮದಲ್ಲಿ ಇದರ ಸದುಪಯೋಗ ಪಡೆದುಕೊಳ್ಳಬಹುದು. ಅಲ್ಪಸಂಖ್ಯಾತ (ಮುಸ್ಲಿಂ, ಕ್ರೈಸ್ತ , ಜೈನ, ಬೌದ್ಧ, ಸಿಖ್ಖ ಹಾಗೂ ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳು ಉಚಿತವಾಗಿ ಪ್ರವೇಶಾತಿ ಪಡೆಯಬಹುದು.
ಆಸಕ್ತರು https://ksouportal.com/views/studenthome.aspx ನಲ್ಲಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ, ಆಯಾ ಶಿಕ್ಷಣಕ್ರಮಗಳಿಗೆ ನಿಗದಿಪಡಿಸಿರುವ ಶೈಕ್ಷಣಿಕ ವಿದ್ಯಾರ್ಹತೆ ಅನುಸಾರ ದಾಖಲಾತಿಗಳೊಂದಿಗೆ ಪ್ರಾದೇಶಿಕ ಕೇಂದ್ರ ಬೀದರ್ ನಲ್ಲಿ ಸಲ್ಲಿಸಿ ಪ್ರವೇಶಾತಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 99866 96487, 99012 16737 ಗೆ ಕರೆ ಮಾಡಬಹುದು ಅಥವಾ ಬೀದರನ ನೌಬಾದನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.