ಬೀದರ್ | ಸಮಾಜ ಕಲ್ಯಾಣ ಇಲಾಖೆಯ ಬಾಲಕ, ಬಾಲಕಿಯರ ವಸತಿ ನಿಲಯಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
ಬೀದರ್ : 2025-26ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆಯುತ್ತಿರುವ ಮೆಟ್ರಿಕ್ ಪೂರ್ವ, ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ HMIS ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಬೀದರ್ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಸತಿ ನಿಲಯಗಳ ವಿವರ : ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕ ವಸತಿ ನಿಲಯ ಜನವಾಡ ರಸ್ತೆ ಬೀದರ್, ಸಿದ್ಧಿತಾಲಿಮ್ ಬೀದರ್, ಪ್ರತಾಪನಗರ, ಜನವಾಡ, ಮನ್ನಳ್ಳಿ, ಮರಕುಂದಾ, ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಜನವಾಡ ರಸ್ತೆ ಬೀದರ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಪ್ರತಾಪನಗರ, ಚಿಟ್ಟಾವಾಡಿ, ಹಳದಕೇರಿ, ವೃತ್ತಿಪರ ವಸತಿ ನಿಲಯ ನೌಬಾದ್, ಪ್ರಥಮ ದರ್ಜೆ ಕಾಲೇಜು ಹಾಸ್ಟೆಲ್, ನೌಬಾದ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಪ್ರತಾಪಗರ್, ಗುಂಪಾ ರಸ್ತೆಯಲ್ಲಿರುವ ವಸತಿ ನಿಲಯ (ಟೌನ್), ಜನವಾಡ ರಸ್ತೆಯಲ್ಲಿರುವ ವಸತಿ ನಿಲಯಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳ ಆಧಾರ್ ಕಾರ್ಡ್, SATS ID, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಅಂಕಪಟ್ಟಿ, ವಿದ್ಯಾರ್ಥಿಯ ಇತ್ತಿಚಿನ ಪಾಸ್ಪೋರ್ಟ್ ಸೈಝ್ ಫೋಟೋ ಮತ್ತು ಆಧಾರ ಜೋಡಣೆ ಇರುವ ಬ್ಯಾಂಕ್ ಖಾತೆ ಸಂಖ್ಯೆ ಹಾಗೂ ಪೋಷಕರ ಮೊಬೈಲ್ ಸಂಖ್ಯೆ ಕಡ್ಡಾಯವಾಗಿದ್ದು, ಈ ಎಲ್ಲಾ ದಾಖಲಾತಿಗಳನ್ನು ದೃಢೀಕರಣದೊಂದಿಗೆ HMIS ತಂತ್ರಾಂಶದ ವಿಳಾಸ https://swdhmis.karnataka.gov.in ಲಿಂಕ್ ಬಳಸಿ ಆ.31 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ವಸತಿ ನಿಲಯದ ವಾರ್ಡನ್ ಅವರಿಗೆ ಅಥವಾ ಕಚೇರಿ ದೂರವಾಣಿ ಸಂಖ್ಯೆ 94808 43082 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.