×
Ad

ಬೀದರ್ | ನವೋದಯ ವಿದ್ಯಾಲಯದಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

Update: 2025-06-04 20:31 IST

ಬೀದರ್ : ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನಲ್ಲಿರುವ ಜವಾಹರ್ ನವೋದಯ ವಿದ್ಯಾಲಯದ 2026-27ನೇ ಸಾಲಿನ 6ನೇ ತರಗತಿಯ ಪ್ರವೇಶಾತಿಗಾಗಿ ಅನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರ್ಕಾರಿ ಮತ್ತು ಸರಕಾರದಿಂದ ಮಾನ್ಯತೆ ಪಡೆದ ಪ್ರಸಕ್ತ ಸಾಲಿನಲ್ಲಿ 5ನೇ ತರಗತಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿಗಳು ಮೇ 1, 2014 ರಿಂದ ಜುಲೈ 31, 2016 ರ ಒಳಗಾಗಿ (ಎರಡು ದಿನಗಳು ಒಳಗೊಂಡಂತೆ) ಜನಿಸಿದವರಾಗಿರಬೇಕು. ಅವರು ಬೀದರ್ ಜಿಲ್ಲೆಯ ನಿವಾಸಿಯಾಗಿ, 5ನೇ ತರಗತಿಯನ್ನು ಇದೇ ಜಿಲ್ಲೆಯಲ್ಲಿ ಓದುತ್ತಿರಬೇಕು ಎಂದು ಮಾಹಿತಿ ನೀಡಿದರು.

ಆಸಕ್ತ ವಿದ್ಯಾರ್ಥಿಗಳು ವೆಬ್‌ಸೈಟ್ https://navodaya.gov.in ಮೂಲಕ ಜೂ.1 ರಿಂದ 29ರ ಒಳಗಾಗಿ ವಿದ್ಯಾರ್ಥಿಗಳ ಭಾವಚಿತ್ರ, ಪೋಷಕರ ಮತ್ತು ವಿದ್ಯಾರ್ಥಿಗಳ ಸಹಿ, ಅಪರ್ ಐಡಿ, ಫೋನ್ ನಂಬರ್ ಮತ್ತು ಆಧಾರ್ ಕಾರ್ಡ್ ನೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ಹೇಳಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 99856 72286 ಹಾಗೂ 97401 06174 ಈ ನಂಬರ್ ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News