Bidar | ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
ಬೀದರ್ : ಮೈಸೂರು ವಿಶ್ವವಿದ್ಯಾನಿಲಯದ ಪ್ರವೇಶಾತಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಎಂವಿಎ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಬಿವಿಎ ಅಥವಾ ಸಮಾನಾಂತರ ಕೋರ್ಸ್‌ಗಳಲ್ಲಿ (ಯುಯುಸಿಎಂಎಸ್) ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಂದ uucms.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಮೈಸೂರು ಸಿದ್ದಾರ್ಥನಗರದ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು (ಕಾವಾ) ಡೀನ್ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಎಂವಿಎ ಸ್ನಾತಕೋತ್ತರ ಪದವಿಯು ದೃಶ್ಯಕಲೆಯಲ್ಲಿ ಎರಡು ವರ್ಷಗಳ ನಾಲ್ಕು ಸೆಮಿಸ್ಟರ್‌ಗಳ ಸಿಬಿಸಿಎಸ್ ಪದ್ಧತಿಯ ಕೋರ್ಸ್ ಆಗಿದ್ದು, ಈ ಸ್ನಾತಕೋತ್ತರ ಪದವಿಯು ಚಿತ್ರಕಲೆ, ಶಿಲ್ಪಕಲೆ, ಮತ್ತು ಗ್ರಾಫಿಕ್ಸ್ (ಅಚ್ಚುಕಲೆ) ವಿಷಯಗಳಲ್ಲಿ ವಿಶೇಷ ಅಧ್ಯಯನವನ್ನು ಒಳಗೊಂಡಿರುತ್ತದೆ. ಪ್ರವೇಶಾತಿ ಕೋರಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹತಾ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ದಿನಾಂಕ ನಂತರ ತಿಳಿಸಲಾಗುವುದು.
ವೆಬ್‌ಸೈಟ್ UUCMS:Khttps://uucms.karnataka.gov.in ನಲ್ಲಿ 2026ರ ಜು.18ರ ಒಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ cavamysore.karnataka.gov.in ಅಥವಾ 0821-2438931ಗೆ ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.