Bidar | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಬೀದರ್: 2026-27ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಾದ ಧನಶ್ರೀ, ಉದ್ಯೋಗಿನಿ, ಚೇತನ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಧನಶ್ರೀ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಿಗೆ ಆನ್‌ಲೈನ್ ಜೊತೆಗೆ ಆಫ್‌ಲೈನ್‌ನಲ್ಲೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವವರು ಬೀದರ್ ನಗರದ ಮೈಲೂರಿನಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು.
ಯೋಜನೆಗಳ ಅರ್ಹತಾ ವಯೋಮಿತಿ :
ಉದ್ಯೋಗಿನಿ ಯೋಜನೆಗೆ 21ರಿಂದ 55 ವರ್ಷ, ಚೇತನ ಯೋಜನೆಗೆ 20ರಿಂದ 55 ವರ್ಷ, ಧನಶ್ರೀ ಯೋಜನೆಗೆ 20ರಿಂದ 55 ವರ್ಷ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗೆ 20ರಿಂದ 55 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು.
ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 31ರಂದು ಸಂಜೆ 5.30 ಗಂಟೆ ಕೊನೆಯ ದಿನಾಂಕ ಮತ್ತು ಸಮಯವಾಗಿದೆ.
2023-24, 2024-25 ಹಾಗೂ 2025-26ನೇ ಸಾಲಿನಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿ ಇನ್ನೂ ಸೌಲಭ್ಯ ಪಡೆಯದೇ ಇರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.