ಬೀದರ್ | ಅಲ್ಪಸಂಖ್ಯಾತರ ಸಾಮೂಹಿಕ ವಿವಾಹ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ
ಬೀದರ್ : ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಸಮುದಾಯದ ಸರಳ ವಿವಾಹಕ್ಕೆ ಪ್ರೋತ್ಸಾಹ ಧನ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50 ಸಾವಿರ ರೂ. ಹಾಗೂ ಸಾಮೂಹಿಕ ವಿವಾಹವನ್ನು ಏರ್ಪಡಿಸುವ ಆಯೋಜಕರುಗಳಿಗೆ ಪ್ರೋತ್ಸಾಹ ಹಾಗೂ ವಿವಾಹದ ಖರ್ಚು ವೆಚ್ಚಗಳಿಗಾಗಿ ಪ್ರತಿ ಜೋಡಿಗಳಿಗೆ 5 ಸಾವಿರ ರೂ. ನೀಡಲಾಗುತ್ತದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಮೂಹಿಕ ವಿವಾಹ ಹಮ್ಮಿಕೊಳ್ಳುವ ಆಯೋಜಕರು ಕನಿಷ್ಠ 7 ದಿನ ಮುಂಚಿತವಾಗಿ ಸ್ವಂತ ಜಿಲ್ಲೆಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ, ವಿವಾಹ ನಡೆದ ಮೂರು ತಿಂಗಳ ಒಳಗಡೆ ವಧು-ವರರ ದಾಖಲಾತಿಗಳನ್ನು ಜಿಲ್ಲಾ ಕಚೇರಿಗೆ ಸಲ್ಲಿಸಬೇಕು.
ಕನಿಷ್ಠ 5 ನವ ಜೋಡಿಗಳಿಗೆ ಸಾಮೂಹಿಕ ವಿವಾಹ ಎರ್ಪಡಿಸುವುದು. ಮೊದಲನೇ ವಿವಾಹವಾಗುತ್ತಿರುವ ನವ ಜೋಡಿಯಾಗಿರಬೇಕು. ವಧುವಿನ ವಯಸ್ಸು 18 ವರ್ಷದಿಂದ 42 ವರ್ಷದ ಒಳಗಿರಬೇಕು. ವರನ ವಯಸ್ಸು 21 ವರ್ಷದಿಂದ 45 ವರ್ಷದೊಳಗಿನ ಆಗಿರಬೇಕು. ವಾರ್ಷಿಕ ಆದಾಯ 2.50 ಲಕ್ಷ ರೂ. ಮತ್ತು ಮಧು ವರರ ಒಟ್ಟು ಅದಾಯ 5 ಲಕ್ಷ ರೂ. ಮೀರತಕ್ಕದ್ದಲ್ಲ. ಜೀವನದಲ್ಲಿ ಒಮ್ಮೆ ಮತ್ತು ಕುಟುಂಬದಲ್ಲಿ ಒಬ್ಬರು ಮಾತ್ರ ಈ ಸೌಲಭ್ಯ ಪಡೆಯಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿ ಬೀದರ್ ನ ದೂರವಾಣಿ ಸಂಖ್ಯೆ: 80482-295210, 89513 91061 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.