×
Ad

ಬೀದರ್ | ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Update: 2025-08-20 18:22 IST

ಬೀದರ್ : 2025-26ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲೆಮಾರಿ-ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆಯ ಸೌಲಭ್ಯಕ್ಕಾಗಿ ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಅರ್ಹ ವಿದ್ಯಾರ್ಥಿಗಳು ಸೆ. 30 ರ ಒಳಗಾಗಿ ವೆಬ್‍ಸೈಟ್ https://ssp.postmatric.karnataka.gov.in ದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಕ್ಕಾಗಿ https://bcwd.karnataka.gov.in ವೆಬ್‍ಸೈಟ್‍ನ್ನು ನೋಡಬಹುದು. ರಾಜ್ಯ ವಿದ್ಯಾರ್ಥಿ ವೇತನದ ಸಹಾಯವಾಣಿ 1902 ಅಥವಾ ಇ-ಮೇಲ್ Postmatric@karnataka.gov.in ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ Postmatric@karnataka.gov.in ಇಲಾಖೆಯ ಸಹಾಯವಾಣಿ 80507 70005 ಅಥವಾ ಇಮೇಲೆ bcwdhelpline@gmail.com ಗೆ ಸಂಪರ್ಕಿಸಬಹುದು bcwdhelpline@gmail.com ದು ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News