ಬೀದರ್ | ವಿಕಲಚೇತನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಬೀದರ್ : 2025-26ನೇ ಸಾಲಿನಲ್ಲಿ ಎಸ್‍ಎಸ್‍ಪಿ ವಿದ್ಯಾರ್ಥಿ ವೇತನ ಯೋಜನೆಯಡಿ ವಿಕಲಚೇತನರ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿಕಲಚೇತನ ವಿದ್ಯಾರ್ಥಿಗಳು ಅರ್ಜಿ ಹಾಕಲು ಅರ್ಹರಾಗಿದ್ದು, ವಿಕಲಚೇತನ ವಿದ್ಯಾರ್ಥಿಗಳು ವೆಬ್‍ಸೈಟ್ https://ssp.postmatric.karnataka.gov.in/2223_Processing/LoginPage ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಒಂದು ಪ್ರತಿಯನ್ನು ನಗರದ ಮೈಲೂರಿನಲ್ಲಿರುವ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ಸಲ್ಲಿಸಬೇಕು ಎಂದು ಅವರು ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08482-234647, ಬೀದರ್ ತಾಲ್ಲೂಕು ಎಂ.ಆರ್.ಡಬ್ಲ್ಯೂ. ಮೊಬೈಲ್ ಸಂಖ್ಯೆ: 98808 01991, ಭಾಲ್ಕಿ ತಾಲ್ಲೂಕು : 97411 66275, ಬಸವಕಲ್ಯಾಣ ಮತ್ತು ಹುಮನಾಬಾದ್ ತಾಲ್ಲೂಕು : 96112 21445, 84325 74070, ಔರಾದ್ ತಾಲ್ಲೂಕು : 96115 90832, ಹುಮನಾಬಾದ್ ತಾಲ್ಲೂಕು : 97317 72898 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.