×
Ad

Bidar | ಎಣ್ಣೆಕಾಳು ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

Update: 2026-07-06 22:07 IST

ಬೀದರ್ : 2026-27ನೇ ಸಾಲಿನ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ (ಎಣ್ಣೆಕಾಳು) ಯೋಜನೆಯಡಿ ಎಣ್ಣೆಕಾಳು ಕೋಯ್ಲೋತರ (ಸಂಸ್ಕರಣಾ) ಘಟಕಗಳಿಗೆ ಮೂಲಸೌಕರ್ಯ ಕಲ್ಪಿಸಲು ಕೃಷಿ ಇಲಾಖೆ ಅರ್ಜಿ ಆಹ್ವಾನಿಸಿದೆ.

ಜಂಟಿ ಕೃಷಿ ನಿರ್ದೇಶಕಿ ದೇವಿಕಾ ಆರ್ ಪ್ರಕಟಣೆ ನೀಡಿ, ಸ್ಥಳೀಯ ಮಟ್ಟದಲ್ಲಿ ಉದ್ಯೋಗಾವಕಾಶ ಸೃಷ್ಟಿಸುವುದು, ಶುದ್ಧ ಖಾದ್ಯ ತೈಲ ಬಳಕೆಗೆ ಉತ್ತೇಜನ ನೀಡುವುದು ಹಾಗೂ ಎಣ್ಣೆಕಾಳು ಬೆಳೆಗಳ ಉತ್ಪಾದನೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಯೋಜನೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಯೋಜನೆಯಡಿ ಎಣ್ಣೆಕಾಳು ಸಂಸ್ಕರಣಾ ಘಟಕಗಳಿಗೆ ಅಗತ್ಯ ಯಂತ್ರೋಪಕರಣಗಳ ಖರೀದಿಗಾಗಿ ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳು, ರೈತ ಉತ್ಪಾದಕ ಸಂಘಗಳು (ಎಫ್‌ಪಿಒ) ವಿಸ್ತೃತ ಯೋಜನಾ ವರದಿಯೊಂದಿಗೆ ಅರ್ಜಿ ಸಲ್ಲಿಸಬಹುದು. ಯೋಜನಾ ವೆಚ್ಚದ ಶೇ.33ರಷ್ಟು ಅಥವಾ ಗರಿಷ್ಠ ₹9.99 ಲಕ್ಷದವರೆಗೆ ಸಹಾಯಧನ ನೀಡಲಾಗುತ್ತದೆ.

ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯ ಸಮಿತಿ ಅರ್ಜಿಗಳನ್ನು ಪರಿಶೀಲಿಸಿ, ಕಾರ್ಯಕಾರಿ ಸಮಿತಿಯ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News