ಬೀದರ್: ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೀದರ್ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಖಾಲಿ ಇರುವ 27 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 103 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು bidar.nic.in ವೆಬ್‌ಸೈಟ್ ಮೂಲಕ ಡಿಸೆಂಬರ್ 11ರ ಸಂಜೆ 5.30ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಬೀದರ್ ಜಿಲ್ಲಾ ವರದಿಗಾರರು

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ