ಬೀದರ್: ಜಿಲ್ಲೆಯ ಪ್ರಾದೇಶಿಕ ಕೇಂದ್ರವಾಗಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಶೈಕ್ಷಣಿಕ ವರ್ಷ 2026-27ನೇ ಸಾಲಿನ ಜುಲೈ ಆವೃತ್ತಿಯ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಾದೇಶಿಕ ನಿರ್ದೇಶಕ ಡಾ. ಸಂಗಮೇಶ್ ಎಸ್. ಹಿರೇಮಠ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಪ್ರಥಮ ವರ್ಷದ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್ಸಿ., ಬಿ.ಎಸ್‌ಡಬ್ಲ್ಯೂ., ಬಿ.ಲಿಬ್.ಐ.ಎಸ್ಸಿ., ಎಂ.ಎ., ಎಂ.ಕಾಂ., ಎಂ.ಬಿ.ಎ., ಎಂ.ಎಸ್ಸಿ., ಎಂ.ಸಿ.ಎ., ಎಂ.ಎಸ್‌ಡಬ್ಲ್ಯೂ., ಎಂ.ಲಿಬ್.ಐ.ಎಸ್ಸಿ. ಸೇರಿದಂತೆ ಯುಜಿ, ಪಿಜಿ ಹಾಗೂ ಡಿಪ್ಲೊಮಾ ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಪ್ರವೇಶಾತಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿಗಳು ಪ್ರವೇಶಾತಿ ಪಡೆಯಲು ವಿಶ್ವವಿದ್ಯಾಲಯದ ಆನ್‌ಲೈನ್ ಪೋರ್ಟಲ್ ksouportal.com ಮೂಲಕ ಅಕ್ಟೋಬರ್ 13ರೊಳಗಾಗಿ ಅರ್ಜಿ ಸಲ್ಲಿಸಬೇಕು. ಆಯಾ ಶಿಕ್ಷಣ ಕ್ರಮಗಳಿಗೆ ನಿಗದಿಪಡಿಸಿರುವ ಶೈಕ್ಷಣಿಕ ವಿದ್ಯಾರ್ಹತೆಗೆ ಅನುಗುಣವಾಗಿ ಸೂಕ್ತ ದಾಖಲಾತಿಗಳೊಂದಿಗೆ ಪ್ರಾದೇಶಿಕ ಕೇಂದ್ರ, ಬೀದರ್‌ನಲ್ಲಿ ಸಲ್ಲಿಸಿ ಪ್ರವೇಶಾತಿ ಪಡೆಯಬೇಕು ಎಂದು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ದೂರವಾಣಿ ಸಂಖ್ಯೆ 99167 83555 ಅಥವಾ 99012 16737ಕ್ಕೆ ಕರೆ ಮಾಡಬಹುದು. ಅಥವಾ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ನೌಬಾದ್, ಬೀದರ್‌ಗೆ ಖುದ್ದಾಗಿ ಭೇಟಿ ನೀಡಿ ಪ್ರವೇಶಾತಿ ಕುರಿತು ಮಾಹಿತಿ ಪಡೆಯಬಹುದು ಎಂದು ಡಾ. ಸಂಗಮೇಶ್ ಎಸ್. ಹಿರೇಮಠ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor