×
Ad

ಬೀದರ್ | ಎತ್ತಿನಬಂಡಿ ಓಟ ಕ್ರೀಡೆ ಆಯೋಜನೆಗೆ ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Update: 2025-11-07 18:04 IST

ಬೀದರ್ : ಜಿಲ್ಲೆಯಲ್ಲಿ ಎತ್ತಿನಬಂಡಿ ಓಟ ಕ್ರೀಡೆಯನ್ನು ಆಯೋಜಿಸಲಾಗುತ್ತಿದ್ದು, ಎತ್ತಿನಬಂಡಿ ಓಟ ಕ್ರೀಡೆಯಲ್ಲಿ ಆಸಕ್ತ ಹೊಂದಿರುವ ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಎತ್ತಿನಬಂಡೆ ಕ್ರೀಡೆಗೆ ಪ್ರೋತ್ಸಾಹ ಮತ್ತು ಉತ್ತೇಜನ ನೀಡುವ ನಿಟ್ಟಿನಲ್ಲಿ 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಮುಖ್ಯಮಂತ್ರಿ ಅವರು ಘೋಷಿಸಿದ್ದಾರೆ. ಎತ್ತಿನ ಬಂಡಿ ಕ್ರೀಡೆಗೆ ಪ್ರೊತ್ಸಾಹ ಹಾಗೂ ಉತ್ತೇಜನ ನೀಡಲು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಯೋಜಿಸುವ 15 ಸಂಘ ಸಂಸ್ಥೆಗಳಿಗೆ ತಲಾ 2 ಲಕ್ಷ ರೂ. ಅನುದಾನ ನೀಡಿ ಪ್ರೋತ್ಸಾಹಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬೀದರ ಜಿಲ್ಲೆಯಲ್ಲಿ ಎತ್ತಿನಬಂಡೆ ಕ್ರೀಡೆಯನ್ನು ಆಯೋಜಿಸಲು ಆಸಕ್ತಿವುಳ್ಳವರು ತಮ್ಮ ಸಂಘ ಸಂಸ್ಥೆಗಳ ಪೂರ್ಣ ವಿವರವನ್ನು ನೆಹರು ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ನ.14 ರ ಒಳಗಾಗಿ ಪ್ರಸ್ತಾವನೆ ಸಲ್ಲಿಸಬೇಕು ಎಂದು ಅವರು ಹೇಳಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News