ಬೀದರ್ ಎಟಿಎಂ ದರೋಡೆ ಪ್ರಕರಣ: ಇಬ್ಬರು ಆರೋಪಿಗಳು 14 ದಿನ ಪೊಲೀಸ್ ಕಸ್ಟಡಿಗೆ
ಆರೋಪಿಗಳನ್ನು ಕರೆದೋಯ್ದು ಸ್ಥಳ ಮಹಜರು ನಡೆಸಿದ ಪೊಲೀಸರು
Update: 2026-08-14 18:51 IST
ಬೀದರ್: ಎಟಿಎಂ ದರೋಡೆ ಹಾಗೂ ಶೂಟೌಟ್ ಪ್ರಕರಣದಲ್ಲಿ ಬಂಧಿತರಾಗಿರುವ ಇಬ್ಬರು ಆರೋಪಿಗಳನ್ನು 14 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.
ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದು, ಘಟನೆ ನಡೆದ ಸ್ಥಳಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಕರೆದೊಯ್ದು ಸ್ಥಳ ಮಹಜರು ನಡೆಸಿದರು.
2025ರ ಜ.16ರಂದು ನಗರದ ಎಟಿಎಂ ಸಿಬ್ಬಂದಿಯನ್ನು ಕೊಲೆ ಮಾಡಿ ಸುಮಾರು 83 ಲಕ್ಷ ರೂ. ದೋಚಿದ್ದ ಪ್ರಕರಣದಲ್ಲಿ ಬಿಹಾರ ಮೂಲದ ಆರೋಪಿಗಳಾದ ಅಮನ್ ಕುಮಾರ್ ಹಾಗೂ ಅಲೋಕ್ ಕುಮಾರ್ ತಲೆಮರೆಸಿಕೊಂಡಿದ್ದರು. ಆರೋಪಿಗಳ ಬಂಧನಕ್ಕಾಗಿ ಜಿಲ್ಲಾ ಪೊಲೀಸರು ಸತತವಾಗಿ ಕಾರ್ಯಾಚರಣೆ ನಡೆಸಿದ್ದರು.
ಸುಮಾರು 19 ತಿಂಗಳ ಬಳಿಕ, ಆ.12ರಂದು ಬೀದರ್ ಜಿಲ್ಲಾ ಪೊಲೀಸರು ಬಿಹಾರದಲ್ಲೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಳಿಕ ಆ.13ರಂದು ಆರೋಪಿಗಳನ್ನು ಬೀದರ್‌ಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.