ಬೀದರ್ | ಮಾ.15 ರಂದು ಕರ್ನಾಟಕ ಜಾನಪದ ಅಕಾಡಮಿಯಿಂದ ಪ್ರಶಸ್ತಿ ಪ್ರಧಾನ ಸಮಾರಂಭ
ಬೀದರ್ : ಮಾ.15 ರಂದು ನಗರದ ಶ್ರೀ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಕರ್ನಾಟಕ ಜಾನಪದ ಅಕಾಡಮಿಯಿಂದ ಗೌರವ ಪ್ರಶಸ್ತಿ, ತಜ್ಞ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನ ವಿತರಣಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರಿನ ಕರ್ನಾಟಕ ಜಾನಪದ ಅಕಾಡಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಅವರು ಹೇಳಿದರು.
ಇಂದು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, 2023-24ನೇ ಸಾಲಿನ ವಾರ್ಷಿಕ ಗೌರವ ಹಾಗೂ ತಜ್ಞ ಪ್ರಶಸ್ತಿ ಮತ್ತು 2022-23ನೇ ಸಾಲಿನ ಪುಸ್ತಕ ಬಹುಮಾನ ವಿತರಣಾ ಸಮಾರಂಭ ಮಾಡುತ್ತಿದ್ದೇವೆ. ಇದು ಬಸವಣ್ಣನ ನಾಡು ಆಗಿರುವುದರಿಂದ ಇಲ್ಲಿಂದಲೇ ನಮ್ಮ ಪ್ರಶಸ್ತಿಗಳು ಪ್ರಾರಂಭವಾಗಬೇಕೆ ಎನ್ನುವುದು ಉದ್ದೇಶವಾಗಿದೆ ಎಂದರು.
ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಮ್ ಖಾನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಸಾಗರ್ ಖಂಡ್ರೆ ಅವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಜಾನಪದ ಅಕಾಡಮಿಯ ಸದಸ್ಯ ಸಂಚಾಲಕ ವಿಜಯಕುಮಾರ್ ಸೋನಾರೆ ಮತ್ತು ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ್ ಸಿಂಧೆ ಅವರು ಉಪಸ್ಥಿತರಿದ್ದರು.