Bidar | ಮೇ 26ರಂದು ಕನ್ನಡ ಭಾಷೆಯ ಉಳಿವು ಕುರಿತು ಜಾಗೃತಿ ಕಾರ್ಯಕ್ರಮ
ಬೀದರ್ : ಮೇ.26ರಂದು ಬೆಳಿಗ್ಗೆ 10:30 ಗಂಟೆಗೆ ಔರಾದ್ ತಾಲೂಕಿನ ಸಂತಪೂರ್ ಗ್ರಾಮದ ಆನಂದ್ ಪ್ರೌಢ ಶಾಲೆಯಲ್ಲಿ ಕನ್ನಡ ಭಾಷೆಯ ಉಳಿವು ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ್ ಹಲಗತ್ತಿ ಹಾಗೂ ಜಿಲ್ಲಾ ಸಂಯೋಜಕ ಮಹೇಶ್ ಗೋರನಾಳಕರ್ ಅವರು ಜಂಟಿಯಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ವಿದ್ಯಾವರ್ಧಕ ಸಂಘದ ವತಿಯಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಸಂಘದ ಕಾರ್ಯಚಟುವಟಿಕೆಗಳ ಚಾಲನೆ, ಸಂಘದ ಸಂಕ್ಷಿಪ್ತ ಮಾಹಿತಿ ಹಾಗೂ ಗಡಿಭಾಗದಲ್ಲಿ ಕನ್ನಡ ಭಾಷೆಯ ಉಳಿವಿನ ಕುರಿತು ಜಾಗೃತಿ ಮೂಡಿಸುವ ಉದ್ದೇಶ ಹೊಂದಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ಸರ್ಕಾರಿ ಪದವಿ ಪೂರ್ವ ಕಾಲೇಜು ಠಾಣಾ ಕುಶನೂರಿನ ಉಪನ್ಯಾಸಕ ದತ್ತಾತ್ರಿ ಮಡಿವಾಳ್ ಉದ್ಘಾಟಿಸಲಿದ್ದು, ಖ್ಯಾತ ಜಾನಪದ ಗಾಯಕ ಹಾಗೂ ಕರ್ನಾಟಕ ವಿದ್ಯಾವರ್ಧಕ ಸಂಘದ ಸದಸ್ಯ ಶಂಭುಲಿಂಗ್ ವಾಲ್ದೋಡ್ಡಿ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಪನ್ಮೂಲ ಶಿಕ್ಷಕ ಪ್ರಕಾಶ್ ದೇಶಮುಖ್ ಅವರು “ಗಡಿಭಾಗದಲ್ಲಿ ಕನ್ನಡ ಭಾಷೆ ಉಳಿವು” ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.