×
Ad

ಬೀದರ್ | ಬಗದಲ್ ಸರಕಾರಿ ಶಾಲೆಯ ಮುಖ್ಯಗುರು ಅಮಾನತು

Update: 2025-08-19 22:09 IST

ಬೀದರ್ : ಮಳೆ ಬರುವ ದಿನಗಳಲ್ಲಿ ಮುಂಜಾಗೃತಾ ಕ್ರಮವಾಗಿ ಶಿಕ್ಷಣ ಇಲಾಖೆ ಹೋರಡಿಸಿರುವ ಆದೇಶ ಕಟ್ಟು ನಿಟ್ಟಾಗಿ ಪಾಲಿಸದೆ ಇರುವುದರಿಂದ ತಡೆಗೋಡೆ ಕುಸಿದು ಒಬ್ಬ ವಿದ್ಯಾರ್ಥಿಯ ತಲೆಗೆ ಪೆಟ್ಟಾಗಿದೆ ಎಂದು ಬಗದಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಮಡಯ್ಯಾ ಸ್ವಾಮಿ ಅವರನ್ನು ಅಮಾನತುಗೊಳಿಸಲಾಗಿದೆ.

ಮೌಲಾನಾ ಆಜಾದ್ ಶಾಲೆಯಲ್ಲಿ ಆ.7 ರಂದು ಊಟ ಮಾಡುವ ಸಮಯದಲ್ಲಿ 6ನೇ ತರಗತಿಯ ವಿದ್ಯಾರ್ಥಿಯೊಬ್ಬನ ತಲೆಯ ಮೇಲೆ ತಡೆಗೋಡೆ ಕುಸಿದು ರಕ್ತಸ್ರಾವವಾಗಿತ್ತು. ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಹಾಗೂ ಶಿಸ್ತು ಪ್ರಾಧಿಕಾರಿಗಳು ಮುಖ್ಯಗುರು ಮಡಯ್ಯಾ ಸ್ವಾಮಿ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News