×
Ad

ಬೀದರ್ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮ : ಬಸವರಾಜ್ ಧನ್ನೂರು

Update: 2025-09-01 18:40 IST

ಬೀದರ್ : ಸೆ.3ರಂದು ನಗರದಲ್ಲಿ ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಸವ ಸಂಸ್ಕೃತಿ ಅಭಿಯಾನ ಸ್ವಾಗತ ಸಮಿತಿಯ ಅಧ್ಯಕ್ಷ ಬಸವರಾಜ್ ಧನ್ನೂರು ಅವರು ತಿಳಿಸಿದರು.

ಇಂದು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬಸವತತ್ತ್ವವು ಇಡೀ ಜಗತ್ತಿನಾದ್ಯಂತ ಪ್ರಚುರಪಡಿಸಲು ಬಸವ ಸಂಸ್ಕೃತಿ ಅಭಿಯಾನ ನಡೆಸಲಾಗುತ್ತಿದೆ. ಈ ಅಭಿಯಾನವು ಪ್ರತಿ ಜಿಲ್ಲೆಯಲ್ಲಿ ಒಂದೊಂದು ದಿನದಂತೆ ಸೆಪ್ಟೆಂಬರ್ ತಿಂಗಳು ಸಂಪೂರ್ಣವಾಗಿ ನಡೆಯುತ್ತಿದೆ. ಇಂದು (ಸೆ. 1) ರಂದು ಈ ಕಾರ್ಯಕ್ರಮದ ಉದ್ಘಾಟನೆಯು ಬಸವನ ಬಾಗೇವಾಡಿಯಲ್ಲಿ ಉದ್ಘಾಟನೆಗೊಂಡಿದ್ದು, ಅ. 5 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾರೋಪ ಸಮಾರಂಭ ಏರ್ಪಡಿಸಲಾಗಿದೆ ಎಂದು ಹೇಳಿದರು.

ಸೆ.3 ರಂದು ಬೀದರ್ ನಗರದಲ್ಲಿ ಬಸವ ಸಂಸ್ಕೃತಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಅಂದು ಬೆಳಿಗ್ಗೆ 11 ಗಂಟೆಗೆ ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ವಚನ ಸಂವಾದ ನಡೆಯಲಿದೆ. ಸಾಯಂಕಾಲ 4 ಗಂಟೆಗೆ ಬಸವೇಶ್ವರ್ ವೃತ್ತದಿಂದ ಭೂಮರೆಡ್ಡಿ ಕಾಲೇಜಿನ ವರೆಗೆ ಮೆರವಣಿಗೆ ಮಾಡಲಾಗುವುದು. ಸಾಯಂಕಾಲ 6 ಗಂಟೆಗೆ ಭೂಮರೆಡ್ಡಿ ಕಾಲೇಜಿನ ಆವರಣದಲ್ಲಿ ಸಾರ್ವಜನಿಕ ಸಮಾರಂಭ ಇರಲಿದೆ ಎಂದು ಅವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಹಣಕಾಸು ಸಮಿತಿಯ ಅಧ್ಯಕ್ಷ ಜಯರಾಜ್ ಖಂಡ್ರೆ, ಮೆರವಣಿಗೆ ಅಧ್ಯಕ್ಷ ಸುರೇಶ್ ಚನ್ನಶೆಟ್ಟಿ, ಭಜನಾ ಸಮಿತಿಯ ಚಂದ್ರಶೇಖರ್ ಹೆಬ್ಬಾಳೆ, ಮಹಿಳಾ ಸಮಿತಿಯ ಅಧ್ಯಕ್ಷೆ ಉಷಾ ಮಿರ್ಚೆ, ನಿರ್ಮಲಾ, ಸುವರ್ಣಾ ಧನ್ನೂರು, ಜಗದೀಶ್ ಪಾಟೀಲ್, ಗುಂಡಪ್ಪ ಹಾಗೂ ಯೋಗೇಂದ್ರ ಸೇರಿದಂತೆ ಇತರರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News