×
Ad

ಬೀದರ್ | ತುಮಕೂರು ವಿಶ್ವವಿದ್ಯಾಲಯ ಆಡಳಿತ ಮಂಡಳಿಗೆ ಬಸವರಾಜ ಕನ್ನಾಳೆ ನೇಮಕ

Update: 2025-08-29 16:45 IST

ಬೀದರ್ : ಭಾಲ್ಕಿ ತಾಲೂಕಿನ ಡೊಣಗಾಪುರ ಗ್ರಾಮದ ಬಸವರಾಜ ಕನ್ನಾಳೆ ಅವರನ್ನು ತುಮಕೂರು ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ಕೃಷಿ ಕುಟುಂಬದಿಂದ ಬಂದಿರುವ ಬಸವರಾಜ ಕನ್ನಾಳೆ ಅವರು ರಾಜಕೀಯ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಹಲವು ಸಾಮಾಜಿಕ ಚಟುವಟಿಕೆಗಳಲ್ಲಿ ಸೇವೆ ಸಲ್ಲಿಸಿರುವ ಅವರು ಸಮಾಜಮುಖಿ ವ್ಯಕ್ತಿಯಾಗಿ ಹೆಸರು ಮಾಡಿದ್ದಾರೆ.

ಇವರ ನೇಮಕಕ್ಕೆ ಸ್ನೇಹಿತರು, ಅಭಿಮಾನಿಗಳು ಹಾಗೂ ಸಮಾಜ ಸೇವಕರು ಅಭಿನಂದನೆ ಸಲ್ಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News