×
Ad

ಬೀದರ್‌ | ಪಕ್ಷದ ಚಿಹ್ನೆ ಧರಿಸಿ ಮತದಾನ : ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಪ್ರಕರಣ ದಾಖಲು

Update: 2024-05-08 11:50 IST

ಬೀದರ್ : ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಿರುವುದಾಗಿ ವರದಿಯಾಗಿದೆ.

ಮಂಗಳವಾರ ಬೆಳಿಗ್ಗೆ ಪಟ್ಟಣದ ನಾಲಂದಾ ಪ್ರಾಥಮಿಕ ಶಾಲೆ ಮತಗಟ್ಟೆ ಸಂಖ್ಯೆ 84ರಲ್ಲಿ ತಮ್ಮ ಕುಟುಂಬ ಸಮೇತ ಮತದಾನ ಮಾಡಲು ಬಂದಿದ್ದರು.‌ ಆಗ ಭಗವಂತ ಖೂಬಾ ಅವರು ತಮ್ಮ ಶರ್ಟ್ ಮೇಲೆ ಪಕ್ಷದ ಚಿಹ್ನೆ (ಕಮಲದ ಚಿಹ್ನೆ) ಧರಿಸಿಕೊಂಡು ಮತಗಟ್ಟೆಗೆ ಹೋಗಿ ಮತದಾನ ಮಾಡಿದ ದೂರಿನ ಮೇರೆಗೆ ಅವರ ವಿರುದ್ಧ ಇಲ್ಲಿಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಲ್ಲದೆ, ಮತದಾನ ಮಾಡಿ ಪಾಕ್ದ ಚಿಹ್ನೆ ಇರುವ ಶರ್ಟ್‌ ಧರಿಕೊಂಡೇ ಪತ್ರಕರ್ತರ ಜತೆ ಮಾತನಾಡಿದ್ದು ಪ್ರಜಾ ಪ್ರತಿನಿಧಿ ಕಾಯ್ದೆ ಸ್ಪಷ್ಟ ಉಲ್ಲಂಘನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ದೆ. ಸಹಾಯಕ ಚುನಾವಣಾಧಿಕಾರಿ ನೀಡಿದ ದೂರು ಆಧರಿಸಿ ಖೂಬಾ ವಿರುದ್ಧ ಪ್ರಕರಣ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News