×
Ad

ಬೀದರ್ | ಭಾಲ್ಕಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರಕಾರಿ ವಕೀಲರ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನ

Update: 2025-02-12 20:16 IST

ಬೀದರ್ : ಭಾಲ್ಕಿ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯ ನೇಮಕಾತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಬಾರ್ ಅಸೋಸಿಯೇಷನ್ನಲ್ಲಿ ನೋಂದಣಿ ವಿವರ, ಕರ್ನಾಟಕ ಬಾರ್ ಅಸೋಸಿಯೇಷನ್ ನೋಂದಣಿ ವಿವರ, ದಿವಾಣಿ ನ್ಯಾಯಾಲಯದಲ್ಲಿ ನಡೆಸಿದ ಪ್ರಕರಣಗಳ ಸಂಖ್ಯೆ, ಕ್ರಿಮಿನಲ್ ನ್ಯಾಯಾಲಯದಲ್ಲಿ ನಡೆಸಿದ ಪ್ರಕರಣಗಳ ಸಂಖ್ಯೆ, ಜಾತಿ ಮತ್ತು ಇತ್ಯಾದಿ ಪ್ರಮಾಣ ಪತ್ರ ದಾಖಲೆಗಳು, ವಕೀಲ ವೃತ್ತಿಯಲ್ಲಿ ಕನಿಷ್ಠ 10 ವರ್ಷಗಳ ಸೇವೆ ಸಲ್ಲಿಸಿದ ಅನುಭವ ಹೊಂದಿದ ಅಭ್ಯರ್ಥಿಗಳು ಇರಬೇಕು ಎಂದು ತಿಳಿಸಲಾಗಿದೆ.

ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 5 ಮತ್ತು 26 (2) ಹಾಗೂ 12 (ಎ) (ಬಿ) ಮತ್ತು (ಸಿ) ನಿಯಮಗಳಿಗೆ ಒಳಪಟ್ಟು ಸದರಿ ಹುದ್ದೆಗೆ ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಫೆ. 21 ರ ಸಂಜೆ 4 ಗಂಟೆಯೊಳಗಾಗಿ ಅರ್ಜಿ (03 ಪ್ರತಿಗಳಲ್ಲಿ) ಬೀದರ್ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಸಲ್ಲಿಸಬಹುದು ಎಂದು ಮಾಹಿತಿ ನೀಡಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News