×
Ad

Bidar | ಎಸ್‌ಐಆರ್ ಕರ್ತವ್ಯದ ವೇಳೆ ಬಿಎಲ್‌ಒ ಹೃದಯಾಘಾತದಿಂದ ಮೃತ್ಯು

Update: 2026-07-05 18:04 IST

ಬೀದರ್: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಹಾಗೂ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೀದರ್ ತಾಲೂಕಿನ ಅಮಲಾಪುರ್ ಗ್ರಾಮದಲ್ಲಿ ನಡೆದಿದೆ.

ಭಾಲ್ಕಿ ತಾಲೂಕಿನ ಡೋಣಗಾಪುರ್ ಗ್ರಾಮದ ನಿವಾಸಿ ಸುನೀಲ್ (45) ಮೃತ ಶಿಕ್ಷಕರಾಗಿದ್ದಾರೆ.

ಸುನೀಲ್ ಅವರು ಬೀದರ್ ತಾಲೂಕಿನ ಅಮಲಾಪುರ್ ಗ್ರಾಮದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು, ಜೂನ್ 30ರಿಂದ ಆರಂಭವಾದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕೆ ಬಿಎಲ್‌ಒ ಆಗಿ ನೇಮಕಗೊಂಡಿದ್ದರು.

ಗುರುವಾರ ಅಮಲಾಪುರ್ ಗ್ರಾಮದ ಬೂತ್ ಸಂಖ್ಯೆ 33ರಲ್ಲಿ ಎಸ್‌ಐಆರ್ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವರು ಏಕಾಏಕಿ ಹೃದಯಾಘಾತದಿಂದ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಬೀದರ್ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News