ಬೀದರ್: ಹುಲಸೂರ್ ತಾಲೂಕಿನ ತೋಗಲೂರ್ ಗ್ರಾಮದ ಸಮೀಪ ಮಂಗಳವಾರ ಬೆಳಿಗ್ಗೆ ಭಾಲ್ಕಿಯ ಡೈಮಂಡ್ ಕಾಲೇಜಿಗೆ ಸೇರಿದ ಬಸ್ ರಸ್ತೆ ಬದಿಯ ಗುಂಡಿಗೆ ಉರುಳಿದ ಪರಿಣಾಮ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಪಕ್ಕದ ಗುಂಡಿಗೆ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಬಸ್ಸಿನಲ್ಲಿದ್ದ ಕೆಲ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ.

ಅಪಘಾತದ ತಕ್ಷಣ ಸ್ಥಳೀಯ ಸಾರ್ವಜನಿಕರು ನೆರವಿಗೆ ಧಾವಿಸಿ ಗಾಯಾಳು ವಿದ್ಯಾರ್ಥಿಗಳನ್ನು ಬಸವಕಲ್ಯಾಣದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಗಾಯಗೊಂಡ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಬಸವಕಲ್ಯಾಣ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕುರಿತು ತನಿಖೆ ಮುಂದುವರೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor