×
Ad

Bidar | ಮನೆಗೆ ನುಗ್ಗಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ: ಪ್ರಕರಣ ದಾಖಲು

Update: 2026-07-14 22:23 IST

ಸಾಂದರ್ಭಿಕ ಚಿತ್ರ | Photo Credit : magnific

ಹುಲಸೂರ್ : ತಾಲೂಕಿನ ಗ್ರಾಮವೊಂದರಲ್ಲಿ ಮಹಿಳೆಯ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ಹುಲಸೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

28 ವರ್ಷದ ಮಹಿಳೆ ತಮ್ಮ ಮೂವರು ಮಕ್ಕಳೊಂದಿಗೆ ಮನೆಯಲ್ಲಿ ಇದ್ದ ವೇಳೆ, ಜು.10ರಂದು ರಾತ್ರಿ ಸುಮಾರು 11 ಗಂಟೆಗೆ ಅವರ ಪತಿ ಹೊರಗಡೆ ಹಾಗೂ ಅತ್ತೆ ದೇವಸ್ಥಾನದ ಭಜನೆ ಕಾರ್ಯಕ್ರಮಕ್ಕೆ ತೆರಳಿದ್ದರು. ಇದೇ ವೇಳೆ ಆರೋಪಿ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಲು ಯತ್ನಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಮಹಿಳೆ ಪ್ರತಿರೋಧ ವ್ಯಕ್ತಪಡಿಸಿದ್ದು, ಮಕ್ಕಳು ಜೋರಾಗಿ ಚೀರಾಡಿದ ಹಿನ್ನೆಲೆಯಲ್ಲಿ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಬಳಿಕ ಮನೆಗೆ ಮರಳಿದ ಪತಿ ಹಾಗೂ ಅತ್ತೆಗೆ ನಡೆದ ಘಟನೆ ವಿವರಿಸಿದ ಮಹಿಳೆ, ಕುಟುಂಬ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿ ಹುಲಸೂರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಲಂ 74, 76 ಹಾಗೂ 329(4)ರಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News