Bidar | ಈದ್ ಮಿಲಾದ್ ಶಾಂತಿ ಹಾಗೂ ಸಂಭ್ರಮದಿಂದ ಆಚರಿಸಿ: ಎಸ್‌ಪಿ ಪ್ರದೀಪ್ ಗುಂಟಿ

Update: 2026-08-23 19:11 IST

ಬೀದರ್: ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬವನ್ನು ಶಾಂತಿ, ಸೌಹಾರ್ದತೆ ಹಾಗೂ ಸಂಭ್ರಮದಿಂದ ಆಚರಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಕರೆ ನೀಡಿದರು.

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ರವಿವಾರ ಈದ್ ಮಿಲಾದ್ ಹಬ್ಬದ ಆಚರಣೆ ಕುರಿತು ಹಿಂದೂ ಹಾಗೂ ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ನಡೆದ ಸೌಹಾರ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೀದರ್ ಜಿಲ್ಲೆಯಲ್ಲಿ ಆ.26ರಂದು ಈದ್ ಮಿಲಾದ್ ಹಬ್ಬ ಆಚರಿಸಲಾಗುತ್ತಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಮುಖಂಡರು ಸಹಕಾರ ನೀಡಬೇಕು ಎಂದು ಸೂಚಿಸಿದರು.

ಮುಸ್ಲಿಂ ಬಾಂಧವರು ಹಬ್ಬವನ್ನು ಸಂಭ್ರಮದಿಂದ ಆಚರಿಸುವುದರ ಜತೆಗೆ, ಯಾವುದೇ ಜಾತಿ ಅಥವಾ ಧರ್ಮದ ಜನರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು. ಹಬ್ಬದ ಆಚರಣೆಗೆ ಹಿಂದೂ ಸಮುದಾಯದವರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ಅಥವಾ ಚಟುವಟಿಕೆ ಕಂಡುಬಂದಲ್ಲಿ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಎಸ್‌ಪಿ ಪ್ರದೀಪ್ ಗುಂಟಿ ಕೋರಿದರು.

ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News