ಬೀದರ್ | ಜ.20 ರಂದು ಚನ್ನಬಸವ ಪಟ್ಟದೇವರ ಜಯಂತ್ಯೋತ್ಸವ ಕಾರ್ಯಕ್ರಮ
ಬೀದರ್ : ನಗರದ ಚನ್ನಬಸವ ಪಟ್ಟದೇವರ ರಂಗಮಂದಿರದಲ್ಲಿ ಭಾರತೀಯ ಬಸವ ಬಳಗ ಬೀದರ್ ವತಿಯಿಂದ ಜ.20 ರಂದು ಡಾ.ಚನ್ನಬಸವ ಪಟ್ಟದೇವರ 135ನೇ ಜಯಂತ್ಯೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದೇವರು ಹೇಳಿದರು.
ಇಂದು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಕನ್ನಡ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದ್ದು, ಈ ಪ್ರಶಸ್ತಿಗೆ ರಾದ ಭೀಮಣ್ಣ ಖಂಡ್ರೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಶರಣ ಶಿವಕುಮಾರ್ ಪಾಂಚಾಳ್ ಅವರ ತಂಡದಿಂದ ವಚನ ಸಂಗೀತ ಹಾಗೂ 8ನೇ ತರಗತಿಯ ವಿದ್ಯಾರ್ಥಿಗಳಿಂದ ಮಹಾಕ್ರಾಂತಿ ನಾಟಕ ಪ್ರದರ್ಶನ ನಡೆಯಲಿದೆ. ಹಾಗಾಗಿ ಕಾರ್ಯಕ್ರಮದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಲಾಭ ಪಡೆಯಬೇಕು ಎಂದು ನುಡಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ವಹಿಸುವರು. ಮುಂಡರಗಿಯ ನಿಷ್ಕಲ ಮಂಟಪ ಬೈಲೂರ ಹಾಗೂ ತೋಂಟದಾರ್ಯ ಮಠದ ಶ್ರೀ ನಿಜಗುಣಾನಂದ ಮಹಾಸ್ವಾಮಿಗಳು ಭಾಗವಹಿಸಲಿದ್ದು, ಸಂಸದ ಸಾಗರ ಖಂಡ್ರೆ ಅವರು ಉದ್ಘಾಟಿಸಲಿದ್ದಾರೆ. ಗೌರವಾನ್ವಿತ ಅತಿಥಿಯಾಗಿ ತೆಲಂಗಾಣ ರಾಜ್ಯದ ಜಹೀರಾಬಾದ್ ಸಂಸದ ಸುರೇಶಕುಮಾರ್ ಶೆಟಕಾರ ಅವರು ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಬಸವ ಬಳಗದ ರಾಜ್ಯಧ್ಯಕ್ಷ ಬಾಬು ವಾಲಿ, ವಿಜಯಕುಮಾರ್ ಪಾಟೀಲ್, ಬಾಬುರಾವ್ ದಾನಿ, ಸುರೇಶ್ ಚನ್ನಶೆಟ್ಟಿ ಹಾಗೂ ಜಯರಾಜ್ ಖಂಡ್ರೆ ಸೇರಿದಂತೆ ಇತರರು ಉಪಸ್ಥಿತರಿದ್ದರು.