×
Ad

ಬೀದರ್ | ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗೆ ಮಹತ್ವ ನೀಡಬೇಕು : ಶಾಸಕ ಪ್ರಭು ಚವ್ಹಾಣ್

Update: 2025-02-12 18:24 IST

ಬೀದರ್ : ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗೆ ಮಹತ್ವ ನೀಡಬೇಕು ಎಂದು ಶಾಸಕ ಪ್ರಭು ಚವ್ಹಾಣ್ ಹೇಳಿದ್ದಾರೆ.

ಇಂದು ಔರಾದ್ ತಾಲ್ಲೂಕಿನ ಘಮಸುಬಾಯಿ ತಾಂಡಾ ಬೋಂತಿಯ ಇಚ್ಛಾಪೂರ್ತಿ ಮಾತಾ ಜಗದಂಬಾ ಜಾತ್ರಾ ಮಹೋತ್ಸವದ ನಿಮಿತ್ತ ಆಯೋಜಿಸಲಾದ ಜಂಗಿ ಕುಸ್ತಿ ಸ್ಪರ್ಧೆಗೆ ಶಾಸಕ ಪ್ರಭು ಚವ್ಹಾಣ್ ಅವರು ಇಂದು ಚಾಲನೆ ನೀಡಿ ಅವರು ಮಾತನಾಡಿದರು.

ಕುಸ್ತಿ ನಮ್ಮ ದೇಶದ ಅಪ್ಪಟ ದೇಶೀಯ ಕ್ರೀಡೆಯಾಗಿದೆ. ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾಗಿರುವ ಈ ಕ್ರೀಡೆಯನ್ನು ಉಳಿಸಿ, ಆಟಗಾರರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಜಂಗಿ ಕುಸ್ತಿಯನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುಖಂಡರಾದ ಮಾರುತಿ ಚವ್ಹಾಣ್, ಅಣ್ಣಾರಾವ್ ರಾಠೋಡ್, ಸುರೇಶ್ ಭೋಸ್ಲೆ, ರಾಮಶೆಟ್ಟಿ ಪನ್ನಾಳೆ, ಧೊಂಡಿಬಾ ನರೋಟೆ, ಶಿವರಾಜ್ ಅಲ್ಮಾಜೆ, ಸಚಿನ್ ರಾಠೋಡ್, ಪ್ರತೀಕ್ ಚವ್ಹಾಣ್, ಯಾದವರಾವ್, ಯೋಗೇಶ್ ಪಾಟೀಲ್, ಜಾಖೀರ್ ಶೇಖ್ ಹಾಗೂ ಎಂ.ಡಿ ಸಲಾವುದ್ದೀನ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News