ಬೀದರ್| ನಾಯಿ ಕಡಿತದಿಂದ ಮೃತಪಟ್ಟ ಮಗುವಿನ ಕುಟುಂಬಕ್ಕೆ 50 ಸಾವಿರ ರೂ. ಪರಿಹಾರ ವಿತರಣೆ
Update: 2026-05-29 21:42 IST
ಹುಮನಾಬಾದ್ : ನಾಯಿ ಕಡಿತಕ್ಕೆ ಒಳಗಾಗಿ ಮೃತಪಟ್ಟ ಮಗುವಿನ ಕುಟುಂಬಕ್ಕೆ ದುಬಲಗುಂಡಿ ಗ್ರಾಮ ಪಂಚಾಯತ್ ವತಿಯಿಂದ 50 ಸಾವಿರ ರೂ. ಪರಿಹಾರ ಧನ ವಿತರಿಸಲಾಯಿತು.
ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ಮೇ.9ರಂದು ನಾಯಿ ಕಡಿತದಿಂದ ನಾಲ್ಕು ತಿಂಗಳ ಹಸುಗೂಸು ಮೃತಪಟ್ಟಿತ್ತು. ಶುಕ್ರವಾರ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಅಂಜುಮ್ ತಬಸ್ಸುಮ್ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವೀರಶೆಟ್ಟಿ ಪಾಟೀಲ್ ಮೃತ ಮಗುವಿನ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿ, ಪಂಚಾಯತಿ ವತಿಯಿಂದ 50 ಸಾವಿರ ರೂ. ಧನ ಸಹಾಯದ ಚೆಕ್ ಹಸ್ತಾಂತರಿಸಿದರು.
ಈ ವೇಳೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ, ವಕೀಲ ವಿಜಯಕುಮಾರ್ ನಾತೆ ಅವರು ಮಾತನಾಡಿ, ಮೃತ ಮಗುವಿನ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.