ಬೀದರ್ | ನಿರಂತರ ವಿದ್ಯುತ್ ಕಡಿತ; ಜೆಸ್ಕಾಂ ಕಚೇರಿಗೆ ಆಗಮಿಸಿ ರೈತರಿಂದ ಆಕ್ರೋಶ
Update: 2025-06-28 18:28 IST
ಬೀದರ್ : ಭಾಲ್ಕಿ ತಾಲ್ಲೂಕಿನ ಡೋಣಗಾಪುರ ಗ್ರಾಮದಲ್ಲಿ ನಿರಂತರವಾಗಿ ವಿದ್ಯುತ್ ಕಡಿತದಿಂದ ಬೇಸತ್ತ ರೈತರು ಭಾಲ್ಕಿಯ ಜೆಸ್ಕಾಂ ಕಚೇರಿಗೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಗ್ರಾಮದಲ್ಲಿ ಸಮಯಕ್ಕೆ ಸರಿಯಾಗಿ ವಿದ್ಯುತ್ ಸರಬರಾಜು ಮಾಡುತ್ತಿಲ್ಲ. ಇದರಿಂದ ರೈತರಿಗೆ ತೀವ್ರ ಸಮಸ್ಯೆಯಾಗುತ್ತಿದೆ. ಟ್ರಾನ್ಸ್‌ಫಾರ್ಮರ್ ಬದಲಿಸಲು ಜೆಇ ಅವರು ರೈತರಿಂದ ಹಣ ಪಡೆಯುತಿದ್ದಾರೆ ಎಂದು ಆರೋಪಿಸಿದರು.
ಈ ಸಮಸ್ಯೆಯ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತಂದರೂ ಸಹ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.