×
Ad

ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

Update: 2025-06-30 22:29 IST

ಬೀದರ್ : ಬಸವಕಲ್ಯಾಣದ ತಹಶೀಲ್ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ರಾಹುಲ್ ಹೊಸಮನಿ ಎಂಬ ಸಿಬ್ಬಂದಿಯನ್ನು ಭ್ರಷ್ಟಾಚಾರದ ಆರೋಪದಡಿ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ ಹೊರಡಿಸಿದ್ದಾರೆ.

ಬಸವಕಲ್ಯಾಣ ತಾಲ್ಲೂಕಿನ ಉಜಳಂಬ ಗ್ರಾಮದಲ್ಲಿ ಜಮೀನು ಒಂದರ ಹಕ್ಕು ಬದಲಾವಣೆ ಹಾಗೂ ಇತರೆ ಸರ್ಕಾರಿ ಕಚೇರಿ ಕೆಲಸ ಕಾರ್ಯಗಳಿಗೆ ಲಂಚದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದು ವರದಿಯಾಗಿದ್ದು, ಮೇಲ್ನೋಟಕ್ಕೆ ಭ್ರಷ್ಟಾಚಾರ ಮಾಡಿರುವುದು ಕಂಡು ಬರುತ್ತದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಕರ್ತವ್ಯ ನಿರ್ವಹಿಸುವಲ್ಲಿ ನಿರ್ಲಕ್ಷ್ಯತನ ತೋರುತ್ತಿರುವುದರಿಂದ ಕಚೇರಿ ಆಡಳಿತದಲ್ಲಿ ಹಾಗೂ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆ ಇಡುತ್ತಿರುವುದರಿಂದ ಇವರ ವಿರುದ್ಧ ಶಿಸ್ತು ಕ್ರಮ ಕೈಕೊಂಡು ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News