×
Ad

ಬೀದರ್ | ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಚಾಲಕರಿಬ್ಬರಿಗೆ ದಂಡ ವಿಧಿಸಿದ ನ್ಯಾಯಾಲಯ

Update: 2025-07-02 23:45 IST

ಸಾಂದರ್ಭಿಕ ಚಿತ್ರ

ಬೀದರ್ : ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಇಬ್ಬರು ಚಾಲಕರಿಗೆ ಬಸವಕಲ್ಯಾಣದ ಜೆ.ಎಮ್.ಎಫ್.ಸಿ ನ್ಯಾಯಾಲಯವು ತಲಾ 10 ಸಾವಿರ ರೂ. ದಂಡ ವಿಧಿಸಿದೆ.

ಮದ್ಯ ಸೇವನೆ ಮಾಡಿ ವಾಹನ ಚಲಾಯಿಸುವವರ ವಿರುದ್ದ ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಸಿದ್ದೇಶ್ವರ್ ಅವರು ಡ್ರಿಂಕ್ & ಡ್ರೈವ್ ಅಡಿಯಲ್ಲಿ ಎರಡು ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಇದಕ್ಕೆ ಸಂಬಂಧಿಸಿದಂತೆ ಬಸವಕಲ್ಯಾಣ ಸಿವಿಲ್ ನ್ಯಾಯಾಧೀಶ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಲಯವು ಮದ್ಯ ಸೇವನೆ ಮಾಡಿ ವಾಹನ ಚಲಾಯಿಸಿದ ಚಾಲಕರಿಗೆ ತಲಾ 10 ಸಾವಿರ ರೂ. ದಂಡ ವಿಧಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News