×
Ad

ಬೀದರ್ | ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ ಇಬ್ಬರಿಗೆ ದಂಡ ವಿಧಿಸಿದ ನ್ಯಾಯಾಲಯ

Update: 2025-07-18 12:48 IST

ಸಾಂದರ್ಭಿಕ ಚಿತ್ರ

ಬೀದರ್ : ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ ಇಬ್ಬರು ಚಾಲಕರಿಗೆ ಬೀದರ್ ನ ಜೆ ಎಮ್ ಎಫ್ ಸಿ ನ್ಯಾಯಾಲಯವು ದಂಡ ವಿಧಿಸಿ ಆದೇಶ ಹೊರಡಿಸಿದೆ.

ಮದ್ಯ ಸೇವನೆ ಮಾಡಿ ವಾಹನ ಚಲಾಯಿಸುತ್ತಿದ್ದ ಇಬ್ಬರ ವಿರುದ್ದ ಬೀದರ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿತ್ತು.

ಈ ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಾಲಯವು ಮದ್ಯ ಸೇವನೆ ಮಾಡಿ ವಾಹನ ಚಲಾಯಿಸಿದ ಓರ್ವ ಚಾಲಕನಿಗೆ 10,500 ರೂ. ಹಾಗೂ ಇನ್ನೊರ್ವ ಚಾಲಕನಿಗೆ 12,500 ರೂ. ಹೀಗೆ ಒಟ್ಟು 23,000 ರೂ. ದಂಡ ವಿಧಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News