ಪ್ರಭು ಚೌವ್ಹಾಣ್‌

ಬೀದರ್: ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಔರಾದ್ ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಬೆಂಗಳೂರಿನ ಕರ್ನಾಟಕ ಭೂ ಕಬಳಿಕೆ ವಿಶೇಷ ನ್ಯಾಯಾಲಯ ನೋಟೀಸ್ ಜಾರಿಗೊಳಿಸಿದೆ.

ಚಾಂದೋರಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದೀಪಕ್ ಪಾಟೀಲ್ ಅವರು, ಬೀದರ್ ತಾಲ್ಲೂಕಿನ ಕಮಠಾಣಾ ಹೋಬಳಿಯ ಕಪಲಾಪುರ ಪಂಚಾಯಿತಿ ವ್ಯಾಪ್ತಿಯ ಕೊಳಾರ್ (ಬಿ) ಗ್ರಾಮದ ಸರ್ವೆ ನಂ. 102ರಲ್ಲಿರುವ ಸರ್ಕಾರಿ ಜಮೀನಿನ 3 ಎಕರೆ 19 ಗುಂಟೆ ಜಾಗವನ್ನು ಪ್ರಭು ಚೌವ್ಹಾಣ್ ಅವರು ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಶಾಸಕ ಪ್ರಭು ಚೌವ್ಹಾಣ್ ಅವರಿಗೆ ನೋಟೀಸ್ ಜಾರಿಗೊಳಿಸಿದೆ. 2027ರ ಜ.19ರ ಒಳಗಾಗಿ ನೋಟೀಸ್‌ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor