×
Ad

ಬೀದರ್ | ಗಡಿ ಭಾಗದ ಕನ್ನಡ ಶಾಲೆಗಳಲ್ಲಿ ಸಾಂಸ್ಕೃತಿಕ ಚಟುವಟಿಕೆ ನಿರಂತರವಾಗಿ ನಡೆಯಬೇಕು : ಸುನೀಲಕುಮಾರ ಸಿಂಗಾರೆ

Update: 2025-12-30 20:31 IST

ಬೀದರ್ : ಗಡಿ ಭಾಗದಲ್ಲಿರುವ ಕನ್ನಡ ಶಾಲೆಗಳಲ್ಲಿ ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕು. ಜೊತೆಗೆ ಕನ್ನಡ ಭಾಷೆಯನ್ನು ಪ್ರತಿಯೊಬ್ಬರೂ ತಮ್ಮ ದಿನನಿತ್ಯದ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಚಾರ್ಯ ಸುನೀಲಕುಮಾರ್ ಸಿಂಗಾರೆ ಅವರು ಅಭಿಪ್ರಾಯಪಟ್ಟರು.

ಮರಖಲ್ ಗ್ರಾಮದಲ್ಲಿರುವ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ರಂಗ ತರಂಗ ಸಾಮಾಜಿಕಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಗಡಿಭಾಗದ ಸರ್ಕಾರಿ ಶಾಲೆಗಳಲ್ಲಿ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಉಳಿವು, ಬೆಳವಣಿಗೆಗೆ ಶಾಲಾ ಹಂತದಲ್ಲಿಯೇ ಜಾಗೃತಿ ಮೂಡಿಸುವುದು ಅಗತ್ಯವಿದೆ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಕನ್ನಡದ ಸೇವಕ ಕುಪೇಂದ್ರ ಎಸ್. ಹೊಸಮನಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷ ಎಂ.ಪಿ. ಮುದಾಳೆ, ಕನ್ನಡ ಶಿಕ್ಷಕ ಪ್ರಕಾಶ್ ಎಸ್., ದೈಹಿಕ ಶಿಕ್ಷಕ ಮಹಾವೀರ್ ಹೋಳೋಳೆ, ಪದ್ಮಾವತಿ, ಸೈಯದ್ ಶಾಬಾದ್ ಅಲಿ, ರೇಣುಕಾ ಹಾಗೂ ರವಿ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News