ನ.26 ರಂದು ಬೀದರ್ ಸಾಂಸ್ಕೃತಿಕ ಉತ್ಸವ : ಭಿತ್ತಿಪತ್ರ ಬಿಡುಗಡೆ
ಬೀದರ್ : ನ.26 ರಂದು ಸಮರ್ಥ ಸೇವಾ ಸಂಸ್ಥೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ನಗರದ ಮನ್ನಳ್ಳಿ ರಸ್ತೆಯ ಕೆ ಆರ್ ಇ ಫಾರ್ಮಸಿ ಕಾಲೇಜು ಆವರಣದಲ್ಲಿ ನಡೆಯಲಿರುವ 'ಬೀದರ್ ಸಾಂಸ್ಕೃತಿಕ ಉತ್ಸವ'ದ ಭಿತ್ತಿಪತ್ರಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಕನ್ನಡ ರಾಜ್ಯೋತ್ಸವದಂದು ಬಿಡುಗಡೆಗೊಳಿಸಿದರು.
ಭಿತ್ತಿಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಇಂದಿನ ಸಮಾಜಕ್ಕೆ ಅನಿವಾರ್ಯವಾಗಿದ್ದು, ಇವು ಮಾನಸಿಕ ನೆಮ್ಮದಿ ಮತ್ತು ಸಾಮಾಜಿಕ ಬಾಂಧವ್ಯವನ್ನು ಬಲಪಡಿಸುತ್ತವೆ ಎಂದು ಅವರು ಹೇಳಿದರು.
ಉತ್ಸವದ ಪ್ರಮುಖ ಆಕರ್ಷಣೆಯಾಗಿ ಪ್ರಸಿದ್ಧ ಗಾಯಕ ವಿಜಯಪ್ರಕಾಶ್ ಅವರ ಸಂಗೀತ ಸಂಭ್ರಮ ಇರಲಿದೆ. ಖ್ಯಾತ ಚಲನಚಿತ್ರ ನಟಿ ಅಮೂಲ್ಯ ಸಹ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಚಿವ ಖಂಡ್ರೆ ಅವರು ಸಾರ್ವಜನಿಕರನ್ನು ಉತ್ಸವದಲ್ಲಿ ಪಾಲ್ಗೊಂಡು ಸಂಗೀತ ರಸದ ಸವಿಯನ್ನು ಅನುಭವಿಸಲು ಕರೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ಡಾ. ಗಿರೀಶ್ ಬದೋಲೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸುರೇಶ್ ಚನ್ನಶೆಟ್ಟಿ, ಸಮರ್ಥ ಸೇವಾ ಸಂಸ್ಥೆಯ ಕಾರ್ಯದರ್ಶಿ ವೀರೇಶ್ ಸ್ವಾಮಿ, ಶಿವಶಂಕರ್ ಟೋಕರೇ, ವೀರಶೆಟ್ಟಿ ಚನ್ನಶೆಟ್ಟಿ, ಸಿದ್ಧಾರೂಢ ಭಾಲ್ಕೆ ಹಾಗೂ ಅಶೋಕ್ ದಿಡಗೆ ಸೇರಿದಂತೆ ಇತರರು ಇದ್ದರು.