ಬೀದರ್ | ನಕಲಿ ಕೋಚಿಂಗ್ ಸೆಂಟರ್‌ಗಳ ರದ್ದತಿಗೆ ಆಗ್ರಹಿಸಿ ಜೂ.5 ರಂದು ಡಿಸಿ ಕಚೇರಿಗೆ ಮುತ್ತಿಗೆ : ಸೋಮನಾಥ್ ಮುಧೋಳ್
ಬೀದರ್ : ಅಕ್ರಮವಾಗಿ ನಡೆಸುತ್ತಿರುವ ನಕಲಿ ಕೋಚಿಂಗ್ ಸೆಂಟರ್, ಪದವಿ ಪೂರ್ವ ತರಬೇತಿ ಕೇಂದ್ರ, ಪ್ರೌಢ ಶಾಲೆ ಹಾಗೂ ಅಕ್ರಮ ಶಾಲೆಗಳನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿ ಜೂ.5 ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸೋಮನಾಥ್ ಮುಧೋಳ್ ಎಚ್ಚರಿಸದ್ದಾರೆ.
ಇಂದು ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೀಟ್, ಜಿಇಇ ತರಬೇತಿ ಹೆಸರಿನಲ್ಲಿ ಬಡ ಮಕ್ಕಳಿಂದ ದುಬಾರಿ ಶುಲ್ಕ ವಸೂಲಿ ಮಾಡುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಜೂ.4 ರ ಒಳಗಾಗಿ ಕ್ರಮ ಕೈಗೊಳ್ಳದಿದ್ದರೆ ಜೂ.5 ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಜೂ. 5 ರಂದು ಸಾವಿರಾರು ಕರವೇ ಕಾರ್ಯಕರ್ತರು ಸೇರಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು. ಆಗುವ ಅನಾಹುತಗಳಿಗೆ ಸರ್ಕಾರವೇ ಜವಾಬ್ದಾರಿ ಎಂದು ಅವರು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಗೌಡ, ಭಾಲ್ಕಿ ತಾಲ್ಲೂಕು ಅಧ್ಯಕ್ಷ ಬಂಡೆಪ್ಪ ಕರಬಸಣ್ಣ, ಬೀದರ್ ದಕ್ಷಿಣ ಕ್ಷೇತ್ರದ ಅಧ್ಯಕ್ಷ ವೀರಶೆಟ್ಟಿ ಗೌಸಪುರೆ, ಜಿಲ್ಲಾ ಉಪಾಧ್ಯಕ್ಷ ಸೋಮಶೇಖರ್ ಸಜ್ಜನ್ ಹಾಗೂ ಶಿವರುದ್ರ ತೀರ್ಥ ಸೇರಿದಂತೆ ಇತರರು ಇದ್ದರು.