ಬೀದರ್ | ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದವರಿಗೆ ಕಠಿಣ ಶಿಕ್ಷೆ ನೀಡಲು ಒತ್ತಾಯ
ಬೀದರ್ : ವಿಜಯಪುರದಲ್ಲಿ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಖೇಮು ರಾಠೋಡ್ ಮತ್ತು ಆತನ ಸಹಚರರನ್ನು ಕಠಿಣ ಶಿಕ್ಷೆ ನೀಡಿ, ಹಲ್ಲೆಗೊಳಗಾದ ಕಾರ್ಮಿಕರಿಗೆ 20 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಕರುನಾಡು ಕಟ್ಟಡ ಇತರೆ ನಿರ್ಮಾಣ ಕಾರ್ಮಿಕರ ಹಾಗೂ ಗಿಲಾವ ಕಾರ್ಮಿಕರ ಸಂಘ ಒತ್ತಾಯಿಸಿದೆ.
ಇಂದು ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು.
ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದವರ ಮೇಲೆ ಪ್ರಕರಣ ದಾಖಲಿಸಿ, ಜೀವಾವಧಿ ಶಿಕ್ಷೆ ನೀಡಬೇಕು. ಹಲ್ಲೆಗೊಳಗಾದ ಕಾರ್ಮಿಕರಿಗೆ ಮುಖ್ಯಮಂತ್ರಿಗಳು, ಕಾರ್ಮಿಕ ಸಚಿವರು, ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಚಿಕಿತ್ಸೆಯ ಸಂಪೂರ್ಣ ವೆಚ್ಚ ಭರಿಸಿ, ಆ ಕಾರ್ಮಿಕರಿಗೆ ವಸತಿ ಹಾಗೂ ಪ್ರತಿಯೊಬ್ಬರಿಗೂ 20 ಲಕ್ಷ ರೂ. ಪರಿಹಾರ ಧನ ಮಂಜೂರು ಮಾಡಬೇಕು ಎಂದು ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಕರುನಾಡು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಹಾಗೂ ಗಿಲಾವ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಸಂಜುಕುಮಾರ್ ಸಿಂಧೆ, ವೀರ ಕನ್ನಡಿಗರ ಸೇನೆ ರಾಜ್ಯ ಸಂಚಾಲಕ ಡಾ. ಸುಬ್ಬಣ್ಣ ಕರಕನಳ್ಳಿ, ವಿಶ್ವಕರ್ಮ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ದಯಾನಂದ್ ಪಾಂಚಾಳ್, ಕಾರ್ಮಿಕ ಮುಖಂಡರಾದ ಇಬ್ರಾಹಿಮ್, ಎಚ್ ಡಿ ಮೌಲಾ, ರವಿ, ನರಸಿಂಗ್, ಶಿವಕುಮಾರ್ ಅಮಲಾಪೂರು, ಲಕ್ಷ್ಮಣ, ಸಂಜು ಮೇತ್ರೆ, ಸಂಜು ಬನ್ನಿ, ತುಳಸಿರಾಮ ಚಿಟ್ಟಾ, ಮಹೇಶ್, ಪ್ರವೀಣ್ ಅಷ್ಟೂರ್, ನರಸಿಂಗ್ ಚಿದ್ರಿ, ತುಕರಾಮ್ ಬಸಂತಪೂರ, ಅಶೋಕ್, ಭೀಮಶಾ, ತುಕರಾಮ ನೆಳಗೆ, ಶರಣಪ್ಪ, ಸಾಧಕ್ ಅಲಿ ಹಾಗೂ ಶರಣಪ್ಪ ಸೇರಿದಂತೆ ಅನೇಕ ಕಾರ್ಮಿಕರು ಭಾಗವಹಿಸಿದ್ದರು.