ಬೀದರ್: ನಗರದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳಗಳಿಗೆ ಹಾಗೂ ಚಿದ್ರಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದ ಚಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಆಸ್ಪತ್ರೆಯಲ್ಲಿನ ವೈದ್ಯಕೀಯ ಸೇವೆಗಳು, ಔಷಧಿಗಳ ಲಭ್ಯತೆ ಹಾಗೂ ನೈರ್ಮಲ್ಯ ಸ್ಥಿತಿಗತಿಯನ್ನು ಪರಿಶೀಲಿಸಿದರು. ಸಾರ್ವಜನಿಕರು ಮತ್ತು ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ತ್ವರಿತವಾಗಿ ಉತ್ತಮ ಆರೋಗ್ಯ ಸೇವೆ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಬಳಿಕ ಯುಐಡಿಎಫ್ ಯೋಜನೆಯಡಿ ಹಳೆ ಆರ್‌ಟಿಒ ಕಚೇರಿಯ ಕೆಳ ಸೇತುವೆಯಿಂದ ವಿಮಾನ ನಿಲ್ದಾಣದವರೆಗೆ ಕೈಗೆತ್ತಿಕೊಳ್ಳಲಾಗಿರುವ ರಸ್ತೆ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದರು. ಕಾಮಗಾರಿಯನ್ನು ಅತ್ಯಂತ ಗುಣಮಟ್ಟದಿಂದ ಹಾಗೂ ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ವೇಳೆ ಅಮೃತ್-2 ಯೋಜನೆಯಡಿ ಅಭಿವೃದ್ಧಿಪಡಿಸಲಾಗುತ್ತಿರುವ ಸಿದ್ಧರಾಮಯ್ಯ ಉದ್ಯಾನವನ ಹಾಗೂ ಹಳೆ ಆದರ್ಶ ಕಾಲೋನಿಯ ಉದ್ಯಾನವನಗಳ ಕಾಮಗಾರಿಗಳನ್ನೂ ವೀಕ್ಷಿಸಿದ ಅವರು, ಅವುಗಳನ್ನು ಸಾರ್ವಜನಿಕರ ಬಳಕೆಗೆ ಶೀಘ್ರವಾಗಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. ನಗರದ ಎಲ್ಲಾ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor