ಬೀದರ್: ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಕ್ಕಳ ರಕ್ಷಣಾ ನಿರ್ದೇಶನಾಲಯ ವ್ಯಾಪ್ತಿಯ ಸರ್ಕಾರಿ ಬಾಲಕರ ಬಾಲಮಂದಿರ ಹಾಗೂ ಸರ್ಕಾರಿ ಬಾಲಕಿಯರ ಬಾಲಮಂದಿರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಶುಕ್ರವಾರ ಸಂಜೆ ಭೇಟಿ ನೀಡಿ ಮಕ್ಕಳ ವಸತಿ ವ್ಯವಸ್ಥೆ, ನೈರ್ಮಲ್ಯ ಮತ್ತು ಮೂಲಸೌಕರ್ಯಗಳನ್ನು ಪರಿಶೀಲಿಸಿದರು.

ಬಾಲಮಂದಿರಗಳ ನಿರ್ವಹಣೆ ಹಾಗೂ ಮಕ್ಕಳಿಗೆ ಕಲ್ಪಿಸಿರುವ ಆಹಾರ ಸೌಲಭ್ಯಗಳನ್ನು ವೀಕ್ಷಿಸಿದ ಜಿಲ್ಲಾಧಿಕಾರಿಗಳು, ವ್ಯವಸ್ಥೆ ತೃಪ್ತಿಕರವಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಬಳಿಕ ಮಕ್ಕಳೊಂದಿಗೆ ಆತ್ಮೀಯವಾಗಿ ಸಂವಾದ ನಡೆಸಿ ಅವರ ಶಿಕ್ಷಣ, ಆರೋಗ್ಯ ಮತ್ತು ಕ್ಷೇಮಾಭಿವೃದ್ಧಿ ಕುರಿತು ಮಾಹಿತಿ ಪಡೆದರು.

ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಯೊಬ್ಬರೂ ಶ್ರದ್ಧೆಯಿಂದ ವ್ಯಾಸಂಗ ಮಾಡಿ ಉನ್ನತ ಭವಿಷ್ಯ ರೂಪಿಸಿಕೊಳ್ಳಬೇಕು. ಶಿಕ್ಷಣವೇ ಜೀವನದ ಪ್ರಗತಿಗೆ ಭದ್ರ ಅಡಿಪಾಯವಾಗಿದ್ದು, ಓದಿನ ಕಡೆಗೆ ಹೆಚ್ಚಿನ ಗಮನ ಹರಿಸುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸುರೇಖಾ, ಸಹಾಯಕ ಆಯುಕ್ತ ಅಭಿನವ್ ಜೈನ್, ಮಕ್ಕಳ ರಕ್ಷಣಾಧಿಕಾರಿ ಶಾರದಾ ಕಲ್ಮಲಕರ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor