×
Ad

ಬೀದರ್ | ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ

Update: 2025-08-28 18:54 IST

ಬೀದರ್ : ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಭೇಟಿ ನೀಡಿ, ಸ್ಥಳ ವೀಕ್ಷಣೆ ನಡೆಸಿದರು.

ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ (ಬಿ), ಸಿಂದಬಂದಗಿ , ಭಾಲ್ಕಿ ತಾಲೂಕಿನ ಗೋಧಿ ಹಿಪ್ಪರಗಾ, ಕಾರಂಜಾ ಜಲಾಶಯಗಳಿಗೆ ಭೇಟಿ ನೀಡಿದ ಅವರು, ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿದರು.

ಸಿಂದಬಂದಗಿ ಗ್ರಾಮದ ಪ್ರಾಥಮಿಕ ಶಾಲೆಗೆ ನೀರು ನುಗ್ಗಿರುವುದರಿಂದ ತಕ್ಷಣ ನೀರು ಹೊರ ಹಾಕಲು ವ್ಯವಸ್ಥೆ ಮಾಡುವಂತೆ ಗ್ರಾಮದ ಪಿಡಿಓ ಅವರಿಗೆ ಸೂಚಿಸಿದರು.

ಹಳ್ಳಿಖೇಡ (ಬಿ) ಆರೋಗ್ಯ ಕೇಂದ್ರದಲ್ಲಿರುವ ತುರ್ತು ಚಿಕಿತ್ಸಾ ಘಟಕ ಮತ್ತು ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ಗೋಧಿ ಹಿಪ್ಪರಗಾ ಗ್ರಾಮದ ಹೊಲಗಳಲ್ಲಿ ನೀರು ನಿಂತು ಬೆಳೆ ಹಾನಿಯಾದ ಪ್ರದೇಶಗಳನ್ನು ವೀಕ್ಷಿಸಿದರು.

ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಹಳ್ಳ, ಕೆರೆಗಳನ್ನು ದಾಟಬಾರದು. ಜಾನುವಾರುಗಳನ್ನು ಹಳ್ಳದ ತಟಕ್ಕೆ ಬಿಡದಂತೆ ನೋಡಿಕೊಳ್ಳಬೇಕು ಎಂದು ಗ್ರಾಮಸ್ಥರಿಗೆ ಎಚ್ಚರಿಕೆ ನೀಡಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News