×
Ad

ಬೀದರ್ | ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯಾಧ್ಯಕ್ಷರಾಗಿ ಧನರಾಜ್ ತಾಳಂಪಳ್ಳಿ ನೇಮಕ

Update: 2025-06-06 16:28 IST

ಧನರಾಜ್ ತಾಳಂಪಳ್ಳಿ

ಬೀದರ್ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಜಿಲ್ಲೆಯ ಕಾಂಗ್ರೆಸ್ ಮುಖಂಡ ಧನರಾಜ್ ತಾಳಂಪಳ್ಳಿ ಅವರನ್ನು ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಾಳಂಪಳ್ಳಿ ಅವರನ್ನು ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ರಾಜ್ಯದ ನಾಯಕರ ಸಹಕಾರದೊಂದಿಗೆ ಸಹಕಾರ ವಿಭಾಗ ಹಾಗೂ ಪಕ್ಷದ ಬಲವರ್ಧನೆ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಅವರನ್ನು ಸೂಚಿಸಿದ್ದಾರೆ.

ಧನರಾಜ ತಾಳಂಪಳ್ಳಿ ಅವರು ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ(ಬಿ) ಗ್ರಾಮದವರಾಗಿದ್ದು, ಜಿಲ್ಲೆಯ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಲ್ಲಿ ಒಬ್ಬರಾಗಿದ್ದಾರೆ. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಚಟುವಟಿಕೆಗಳಲ್ಲಿ ಅವರು ತೊಡಗಿಸಿಕೊಂಡಿದ್ದು, ಕೆಪಿಸಿಸಿ ಸದಸ್ಯ ಸೇರಿ ಪಕ್ಷದ ವಿವಿಧ ಹುದ್ದೆಗಳಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದಾರೆ. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್‌, ವಿಧಾನಸಭೆ, ವಿಧಾನ ಪರಿಷತ್ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಇವರು ಶ್ರಮಿಸಿದ್ದು, ಕೇರಳದ ವಯನಾಡ್ ಸೇರಿ ವಿವಿಧೆಡೆಯ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕೊಡುಗೆ ನೀಡಿದ್ದಾರೆ.

ತಮ್ಮ ಸೇವೆಯನ್ನು ಗುರುತಿಸಿ ಸಹಕಾರ ವಿಭಾಗದ ರಾಜ್ಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯದ ಸಚಿವರು, ರಾಷ್ಟ್ರ ಹಾಗೂ ರಾಜ್ಯ ಪಕ್ಷದ ಮುಖಂಡರಿಗೆ ಧನರಾಜ್ ತಾಳಂಪಳ್ಳಿ ಅವರು ಕೃತಜ್ಞತೆ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News