Bidar | ಎಚ್‌ಪಿಆರ್ ವೆಲ್ಫೇರ್ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ
ಬೀದರ್: ಎಚ್‌ಪಿಆರ್ ವೆಲ್ಫೇರ್ ಫೌಂಡೇಶನ್ ವತಿಯಿಂದ ಹಾಲಗೋರ್ಟಾ ಹಾಗೂ ವರವಟ್ಟಿ ಶಾಲೆಗಳ ವಿದ್ಯಾರ್ಥಿಗಳಿಗೆ ಪೆನ್ನು, ನೋಟ್‌ಬುಕ್ ಸೇರಿದಂತೆ ವಿವಿಧ ಕಲಿಕಾ ಸಾಮಗ್ರಿಗಳನ್ನು ಸೋಮವಾರ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಫೌಂಡೇಶನ್ ಸಂಸ್ಥಾಪಕ ಹರ್ಷ ದವೇ, ಎಚ್‌ಪಿಆರ್ ವೆಲ್ಫೇರ್ ಫೌಂಡೇಶನ್ ಎಜುಕೇಶನ್ ಸೆಂಟರ್ ಮೂಲಕ ಹಿಂದುಳಿದ ಹಾಗೂ ಅಗತ್ಯವಿರುವ ಮಕ್ಕಳಿಗೆ ಕಲಿಕೆ, ಮಾರ್ಗದರ್ಶನ ಮತ್ತು ಸಮಗ್ರ ಬೆಳವಣಿಗೆಗೆ ಪೂರಕವಾದ ವಾತಾವರಣ ಕಲ್ಪಿಸಲಾಗುತ್ತಿದೆ ಎಂದರು.
ಸಂಸ್ಥೆಯು ಮಕ್ಕಳ ಶೈಕ್ಷಣಿಕ ಪ್ರಗತಿಯ ಜತೆಗೆ ಅವರಲ್ಲಿ ಆತ್ಮವಿಶ್ವಾಸ, ಸೃಜನಶೀಲತೆ, ಶಿಸ್ತು ಹಾಗೂ ಜೀವನ ಕೌಶಲ್ಯಗಳನ್ನು ಬೆಳೆಸಲು ಒತ್ತು ನೀಡುತ್ತಿದೆ. ಪ್ರತಿಯೊಂದು ಮಗುವಿಗೂ ಕಲಿಯಲು, ಬೆಳೆಯಲು ಹಾಗೂ ಉತ್ತಮ ಭವಿಷ್ಯದ ಕನಸು ಕಾಣಲು ಸಮಾನ ಅವಕಾಶ ದೊರೆಯಬೇಕು ಎಂಬುದು ಫೌಂಡೇಶನ್‌ನ ಉದ್ದೇಶವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಯೋಜನಾ ಸಂಯೋಜಕಿ ಸಂಚಯಿತಾ ಚಕ್ರವರ್ತಿ, ಪ್ರಸಾದ್ ಕುಲಕರ್ಣಿ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.