ಬೀದರ್ | ಗಣೇಶ ವಿಸರ್ಜನೆ ನಿಮಿತ್ತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
ಬೀದರ್ : ಜಿಲ್ಲೆಯಲ್ಲಿ ಗಣೇಶ ವಿಗ್ರಹಗಳ ವಿಸರ್ಜನೆಯನ್ನು ಶಾಂತಿಯುತವಾಗಿ ಕೈಗೊಳ್ಳಲು ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಬೀದರ್ ಜಿಲ್ಲೆಯಲ್ಲಿನ ಆಯಾ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ಎಲ್ಲಾ ವಿಧದ ಮದ್ಯದಂಗಡಿಗಳು ಮುಚ್ಚಲು ಹಾಗೂ ಮದ್ಯ ಮಾರಾಟ ಮಾಡುವುದುನ್ನು ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಆದೇಶಿಸಿದ್ದಾರೆ.
ಮದ್ಯ ಮಾರಾಟ ನಿಷೇಧಿಸಿದ ದಿನಾಂಕ ಮತ್ತು ಸಮಯದ ವಿವರ :
ಬೀದರ್ ತಾಲ್ಲೂಕಿನಲ್ಲಿ ಆ.30ರ ಮಧ್ಯರಾತ್ರಿ 12 ಗಂಟೆಯಿಂದ ಸೆ.1ರ ಬೆಳಿಗ್ಗೆ 6 ಗಂಟೆಯವರೆಗೆ.
ಬಸವಕಲ್ಯಾಣ ತಾಲ್ಲೂಕಿನಲ್ಲಿ ಸೆ.5 ರ ಮಧ್ಯರಾತ್ರಿ 12 ಗಂಟೆಯಿಂದ ಸೆ.7 ರ ಬೆಳಿಗ್ಗೆ 6 ಗಂಟೆಯವರೆಗೆ.
ಭಾಲ್ಕಿ ತಾಲ್ಲೂಕಿನಲ್ಲಿ ಸೆ.5 ರ ಮಧ್ಯರಾತ್ರಿ 12 ಗಂಟೆಯಿಂದ ಸೆ.7 ರ ಬೆಳಿಗ್ಗೆ 6 ಗಂಟೆಯವರೆಗೆ.
ಔರಾದ್ ತಾಲ್ಲೂಕಿನಲ್ಲಿ ಸೆ.3ರ ಮಧ್ಯರಾತ್ರಿ 12 ಗಂಟೆಯಿಂದ ಸೆ.5ರ ಬೆಳಿಗ್ಗೆ 6 ಗಂಟೆಯವರೆಗೆ.
ಹುಮನಾಬಾದ್ ತಾಲ್ಲೂಕಿನಲ್ಲಿ ಆ.30 ರ ಮಧ್ಯರಾತ್ರಿ 12ಗಂಟೆಯಿಂದ ಸೆ.1 ರ ಬೆಳಿಗ್ಗೆ 6 ಗಂಟೆವರೆಗೆ ಹಾಗೂ ಸೆ.5ರ ಮಧ್ಯರಾತ್ರಿ 12 ಗಂಟೆಯಿಂದ ಸೆ.7ರ ಬೆಳಿಗ್ಗೆ 6 ಗಂಟೆಯವರೆಗೆ.
ಹುಲಸೂರು ತಾಲ್ಲೂಕಿನಲ್ಲಿ ಸೆ.5ರ ಮಧ್ಯರಾತ್ರಿ 12 ಗಂಟೆಯಿಂದ ಸೆ.7ರ ಬೆಳಿಗ್ಗೆ 6 ಗಂಟೆಯವರೆಗೆ.
ಕಮಲನಗರ ತಾಲ್ಲೂಕಿನಲ್ಲಿ ಸೆ.1ರ ಮಧ್ಯರಾತ್ರಿ 12 ಗಂಟೆಯಿಂದ ಸೆ.3ರ ಬೆಳಿಗ್ಗೆ 6 ಗಂಟೆಯವರೆಗೆ.
ಚಿಟಗುಪ್ಪಾ ತಾಲ್ಲೂಕಿನಲ್ಲಿ ಆ.30 ರ ಮಧ್ಯರಾತ್ರಿ 12 ಗಂಟೆಯಿಂದ ಸೆ.1 ರ ಬೆಳಿಗ್ಗೆ 6 ಗಂಟೆವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ ಎಂದು ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.