×
Ad

Bidar | ಎಸ್‌ಐಆರ್‌ ಪರಿಶೀಲನೆಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮನೆ ಮನೆ ಭೇಟಿ

Update: 2026-07-15 19:15 IST

ಬೀದರ್‌ : ಜಿಲ್ಲಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ಶರ್ಮಾ ಅವರು ಬುಧವಾರ ನಗರದ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.

ಗಣೇಶ್ ನಗರ, ಬಸವ ನಗರ, ಕುಂಬಾರವಾಡ ಹಾಗೂ ಫಯಾಜ್‌ಪೂರ್ ದರ್ಗಾ ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ ಅವರು, ಮನೆ ಮನೆಗೆ ವಿತರಿಸಿರುವ ಎನುಮರೇಷನ್ ಅರ್ಜಿ ನಮೂನೆಗಳನ್ನು ಸಾರ್ವಜನಿಕರು ಸರಿಯಾಗಿ ಭರ್ತಿ ಮಾಡಿ ಶೀಘ್ರವೇ ಬಿಎಲ್‌ಒಗಳಿಗೆ ಸಲ್ಲಿಸುವಂತೆ ಮನವಿ ಮಾಡಿದರು.

ಜಿಲ್ಲೆಯಲ್ಲಿ ಯಾವುದೇ ಅರ್ಹ ವ್ಯಕ್ತಿ ಮತದಾರರ ಪಟ್ಟಿಯಿಂದ ವಂಚಿತರಾಗದಂತೆ ವಿಶೇಷ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದ ಅವರು, ಮನೆ ಮನೆ ಸಮೀಕ್ಷೆಯಲ್ಲಿ ಯಾವುದೇ ಲೋಪಕ್ಕೆ ಅವಕಾಶ ನೀಡಬಾರದು ಎಂದು ಸೂಚಿಸಿದರು.

ಸಾರ್ವಜನಿಕರಿಂದ ಸ್ವೀಕರಿಸುವ ಅರ್ಜಿಗಳನ್ನು ನಿಖರವಾಗಿ ಹಾಗೂ ಜವಾಬ್ದಾರಿಯಿಂದ ಪರಿಶೀಲಿಸಿ ನಿಗದಿತ ಅವಧಿಯೊಳಗೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಚುನಾವಣಾ ಅಧಿಕಾರಿಗಳು ಹಾಗೂ ಬಿಎಲ್‌ಒಗಳಿಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಮುಹಮ್ಮದ್ ಶಕೀಲ್, ಬೀದರ್ ತಹಶೀಲ್ದಾರ್ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News