ಬೀದರ್ | ಬಿತ್ತನೆ ಬೀಜ ವಿತರಣಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ
Update: 2025-06-17 18:30 IST
ಬೀದರ್ : ಕಮಲನಗರ್ ತಾಲ್ಲೂಕಿನ ಹೊಳ ಸಮುದ್ರ ಗ್ರಾಮದ ಬೀಜ ವಿತರಣಾ ಕೇಂದ್ರಕ್ಕೆ ಸೋಮವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರೈತರಿಗೆ ಬಿತ್ತನೆ ಬೀಜಗಳು ಸಮರ್ಪಕವಾಗಿ ನೀಡಲಾಗುತ್ತಿದೆ ಅಥವಾ ಇಲ್ಲವೇ ಎಂದು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಗ್ರಾಮದ ರೈತರೊಂದಿಗೆ ಚರ್ಚಿಸಿ ಮುಂಗಾರು ಕೃಷಿ ಚಟುವಟಿಕೆಗಳಿಗೆ ಬಿತ್ತನೆ ಬೀಜಗಳನ್ನು ಸಮರ್ಪಕವಾಗಿ ವಿತರಿಸಲಾಗುವುದು ಎಂದು ತಿಳಿಸಿ, ರೈತರು ಯಾವುದೇ ಆತಂಕ ಪಡುವಂತಿಲ್ಲ ಎಂದು ಹೇಳಿದರು.