×
Ad

ಬೀದರ್‌ ಜಿಲ್ಲಾ ಕಾಂಗ್ರೆಸ್ ನಲ್ಲಿ ಮತ್ತೆ ಭುಗಿಲೆದ್ದ ಭಿನ್ನಮತ : ಅತೃಪ್ತ ನಾಯಕರು ಬೆಂಗಳೂರಿನಲ್ಲಿ ಸಭೆ

Update: 2026-05-19 22:15 IST

ಬೀದರ್ : ಜಿಲ್ಲಾ ಕಾಂಗ್ರೆಸ್ ನಲ್ಲಿ ಮತ್ತೆ ಭಿನ್ನಮತ ಭುಗಿಲೆದ್ದಿದ್ದು, ಅತೃಪ್ತ ನಾಯಕರು  ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

2025ರಲ್ಲಿ ಮಾಜಿ ಸಚಿವ ರಾಜಶೇಖರ್ ಪಾಟೀಲ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನ ಕೆಲ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಕಾಂಗ್ರೆಸ್ ನ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಈಶ್ವರ್ ಖಂಡ್ರೆ ಅವರ ವಿರುದ್ಧ ತಮ್ಮ ನಿಲುವು ತಿಳಿಸಿದ್ದರು. ನಂತರದಲ್ಲಿ ಪತ್ರಿಕಾಗೋಷ್ಠಿ ಕೂಡ ನಡೆಸಿ ಅಸಮಾಧಾನ ವ್ಯಕ್ತಪಡಿಸಿದ್ದರು. ಕಳೆದ ಕೆಲ ದಿನಗಳಿಂದ ಶಾಂತವಾಗಿದ್ದ ಕೈ ನಾಯಕರು ಇದೀಗ ಮತ್ತೆ ಬೆಂಗಳೂರಿನಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಸಚಿವ ಈಶ್ವರ್ ಖಂಡ್ರೆ ಅವರು ಜಿಲ್ಲೆಯ ಕಾಂಗ್ರೆಸ್ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ. ಹಾಗೆಯೇ ಜಿಲ್ಲೆಯಲ್ಲಿ ಬಿಜೆಪಿ ಜೊತೆಗೆ ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

"ನಿಂತು ಹೋದ ಹೋರಾಟ ಮತ್ತೆ ಪ್ರಾರಂಭ ಮಾಡಲು‌ ಬೆಂಗಳೂರಿನಲ್ಲಿ ಸಭೆ ನಡೆಸಿದ್ದೇವೆ" ಎಂದು ಕಾಂಗ್ರೆಸ್ ನ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ. 

ಈ ಸಂದರ್ಭದಲ್ಲಿ ಮಾಜಿ ಸಚಿವ ರಾಜಶೇಖರ್ ಪಾಟೀಲ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ್ ಅರಳಿ, ಕೆ. ಪುಂಡಲೀಕರಾವ್, ಧನರಾಜ್ ತಾಳಂಪಳ್ಳಿ, ಅದ್ಬುಲ್ ಮನ್ನಾನ್ ಶೇಠ್, ವಿದ್ಯಾಸಾಗರ್ ಸಿಂಧೆ ಸೇರಿದಂತೆ ಇತರ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News