ಬೀದರ್ | ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ್ ಖರ್ಗೆ ಅವರ ಆರೋಗ್ಯ ವಿಚಾರಿಸಿದ ಜಿಲ್ಲಾ ಕಾಂಗ್ರೆಸ್ ನಾಯಕರು
ಬೀದರ್ : ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ.ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿಯಾದ ಜಿಲ್ಲಾ ಕಾಂಗ್ರೆಸ್ ನಾಯಕರು ಅವರ ಆರೋಗ್ಯ ವಿಚಾರಣೆ ನಡೆಸಿದ್ದಾರೆ.
ಡಾ.ಮಲ್ಲಿಕಾರ್ಜುನ್ ಖರ್ಗೆ ಅವರು ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡು ಬೆಂಗಳೂರಿನ ಸದಾಶಿವ ನಗರದ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರನ್ನು ಮಾಜಿ ಸಚಿವ ರಾಜಶೇಖರ್ ಪಾಟೀಲ್, ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ್ ಪಾಟೀಲ್, ವಿಧಾನ ಪರಿಷತ್ ಮಾಜಿ ಸದಸ್ಯ ಅರವಿಂದಕುಮಾರ್ ಅರಳಿ ಹಾಗೂ ಕೆ.ಪುಡಲಿಕರಾವ್ ಅವರು ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದಾರೆ.
ಆರೋಗ್ಯ ಸ್ಥಿರವಾಗಿದ್ದು, ಶೀಘ್ರ ಗುಣಮುಖರಾಗಲಿದ್ದಾರೆ. ತಮ್ಮ ಅನಾರೋಗ್ಯದ ನಡುವೆಯೂ ಕೂಡ ನಮ್ಮ ಜಿಲ್ಲೆಯ ಜನರ ಕುರಿತು ಚಿಂತಿಸುವ ಅವರು ನಮ್ಮ ಬೀದರ್ ಭಾಗದಲ್ಲಿನ ಪ್ರವಾಹ ಪರಿಸ್ಥಿತಿ, ಪರಿಹಾರ ಕಾರ್ಯದ ಕುರಿತು ಮಾಹಿತಿ ಪಡೆದರು. ಇಂತಹ ಮಾನವೀಯ ಗುಣದಿಂದಲೇ ಖರ್ಗೆ ಸಾಹೇಬರು ನಾಡಿನ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ ಎಂದು ಅರವಿಂದಕುಮಾರ್ ಅರಳಿ ಅವರು ಹೇಳಿದ್ದಾರೆ.