ಬೀದರ್ | ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಜಿಲ್ಲಾ ಮಟ್ಟದ ಕಂಟ್ರೋಲ್ ರೂಮ್, ಸಹಾಯವಾಣಿ ಸ್ಥಾಪನೆ
Update: 2025-09-23 16:37 IST
ಬೀದರ್ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ಪ್ರಾರಂಭವಾಗಿದ್ದು, ಇದಕ್ಕೆ ಸಂಬಂಧಿಸಿದ ಮಾಹಿತಿಗಾಗಿ ಜಿಲ್ಲಾ ಮಟ್ಟದ ಕಂಟ್ರೋಲ್ ರೂಮ್ ಅಥವಾ ಸಹಾಯವಾಣಿ ಸೇವೆಯನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಮಟ್ಟದ ಕಂಟ್ರೋಲ್ ರೂಮ್ ಸಹಾಯವಾಣಿಗಳ ವಿವರ :
ಜನವಾಡ ರಸ್ತೆಯ ನಾವದಗೇರಿಯಲ್ಲಿರುವ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯ ಗೀರಿಶ್ ಪ್ರ.ದ.ಸ. (88676 46655), ಶಾರದಾ ಪ್ರ.ದ.ಸ. (81234 06006), ಸುನೀಲ್ ದ್ವಿ.ದ.ಸ. (93538 07858) ಹಾಗೂ ಭರತ್ ಕುಮಾರ್ ಎಸ್. ದ್ವಿ.ದ.ಸ. (81500 90827).
ಮಾಹಿತಿ, ದೂರು, ಆಕ್ಷೇಪಣೆ, ಸಲಹೆ ಇತ್ಯಾದಿ ಬಗ್ಗೆ ತಿಳಿದುಕೊಳ್ಳಲು ಸಾರ್ವಜನಿಕರು ಈ ಮೇಲಿನ ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.