×
Ad

ಬೀದರ್ | ಸೆ.8, 9 ರಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

Update: 2025-09-04 19:14 IST

ಬೀದರ್ : ಪುರುಷ ಮತ್ತು ಮಹಿಳೆಯರಿಗಾಗಿ 2025-26ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟದ ಸ್ಪರ್ಧೆಗಳನ್ನು ಸೆ.8 ಹಾಗೂ 9ರಂದು ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದು, ಕ್ರೀಡಾಪಟುಗಳು ಭಾಗವಹಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಮತ್ತು ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿದ ಕ್ರೀಡಾಪಟುಗಳು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು ಎಂದು ಅವರು ಹೇಳಿದ್ದಾರೆ.

ಅಥ್ಲೆಟಿಕ್ಸ್ ಸ್ಪರ್ಧೆಗಳು(ಪುರುಷರಿಗೆ) : 100 ಮೀ, 200ಮೀ, 400ಮೀ, 800 ಮೀ, 1500 ಮೀ, 5,000 ಮೀ, 10,000ಮೀ ಓಟ., ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ, 110 ಮೀ. ಹರ್ಡಲ್ಸ್, 4*100 ಮೀ ರಿಲೇ, 4*400 ಮೀ ರಿಲೇ.

ಅಥ್ಲೆಟಿಕ್ಸ್ ಸ್ಪರ್ಧೆಗಳು(ಮಹಿಳೆಯರಿಗೆ) : 100 ಮೀ, 200ಮೀ, 400ಮೀ, 800 ಮೀ, 1500 ಮೀ, 3,000 ಮೀ. ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ, 100 ಮೀ ಹರ್ಡಲ್ಸ್, 4*100 ಮೀ ರಿಲೇ, 4*400 ಮೀ ರಿಲೇ.

ಜಿಲ್ಲಾ ಮಟ್ಟದಲ್ಲಿ ಆಯೋಜಿಸಬೇಕಾದ ಕ್ರೀಡೆಗಳು: ವಾಲಿಬಾಲ್, ಫುಟ್‌ಬಾಲ್, ಖೋ-ಖೋ, ಕಬಡ್ಡಿ, ಬಾಸ್ಕೆಟ್‌ಬಾಲ್, ಕುಸ್ತಿ, ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್‌ ಬಾಲ್, ಟೇಬಲ್ ಟೆನ್ನೀಸ್, ಥ್ರೋಬಾಲ್, ಬಾಲ್‌ ಬ್ಯಾಡ್ಮಿಂಟನ್, ಯೋಗ.

ಜಿಲ್ಲಾ ಮಟ್ಟದಲ್ಲಿ ಆಯ್ಕೆ ಮಾಡಬೇಕಾದ ಕ್ರೀಡೆಗಳು: ಟೆನ್ನೀಸ್, ನೆಟ್‌ಬಾಲ್, ಈಜು ಇರಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಭಾಗವಹಿಸುವ ಕ್ರೀಡಾಪುಟುಗಳಿಗೆ ಊಟೋಪಾಹಾರ ಇರುತ್ತದೆ. ಆಸಕ್ತ ಕ್ರೀಡಾಪಟುಗಳು ಭಾಗವಹಿಸಬೇಕು. ಭಾಗವಹಿಸುವ ಕ್ರೀಡಾಪಟುಗಳಿಗೆ ಪ್ರಯಾಣ ಭತ್ಯೆ ನೀಡಲಾಗುವುದು. (ಬ್ಯಾಂಕ್ ಪಾಸ್‌ಬುಕ್ ಜಿರಾಕ್ಸ್ ಪ್ರತಿ ನೀಡಬೇಕು). ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 63614 88733 ಹಾಗೂ 95916 09691 ಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News