ಬೀದರ್ | ಫೆ.9 ರಂದು ಜಿಲ್ಲಾ ಮಟ್ಟದ ಸಾವಯವ, ಸಿರಿಧಾನ್ಯ ಮೇಳ
ಬೀದರ್ : ನಗರದ ನೆಹರೂ ಕ್ರೀಡಾಂಗಣದಲ್ಲಿ ಫೆ.9 ರಂದು ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯ ಮೇಳ -2025 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 9:30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಬೀದರ್ ನಗರದ ನೆಹರೂ ಕ್ರೀಡಾಂಗಣದವರೆಗೆ ಸಿರಿಧಾನ್ಯ ನಡಿಗೆ ಹಾಗೂ ಬೆಳಿಗ್ಗೆ 11 ಗಂಟೆಯಿಂದ ನಗರದ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯ ಮೇಳ-2025 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಕಾರ್ಯಕ್ರಮವನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಬಿ.ಖಂಡ್ರೆ ಅವರು ಉದ್ಘಾಟಿಸಲಿದ್ದಾರೆ. ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಲೋಕಸಭಾ ಸದಸ್ಯ ಸಾಗರ್ ಖಂಡ್ರೆ, ಶಾಸಕರಾದ ಪ್ರಭು ಚವ್ಹಾಣ, ಶರಣು ಸಲಗರ್, ಡಾ.ಶೈಲೇಂದ್ರ ಬೆಲ್ದಾಳೆ, ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ್ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ಭೀಮರಾವ್ ಬಿ.ಪಾಟೀಲ್, ಡಾ.ಎಂ.ಜಿ.ಮೂಳೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಾಲಾ ನಾರಾಯಣರಾವ್, ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ್ ಜಾಬಶೆಟ್ಟಿ, ಕೃಷಿಕರ ಸಮಾಜದ ಜಿಲ್ಲಾಧ್ಯಕ್ಷ ಸಿದ್ರಾಮಯ್ಯಾ ಸ್ವಾಮಿ, ವಿಶ್ವನಾಥ್ ಪಾಟೀಲ್ ಮಾಡಗೊಳ್, ಪಶು ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ.ಸಿ. ವೀರಣ್ಣ, ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ. ಎಸ್.ವಿ. ಪಾಟೀಲ್, ಕೃಷಿ ಸಂಶೋಧನ ಕೇಂದ್ರ ಮುಖ್ಯಸ್ಥ ಡಾ. ಭವಾನಿ ಕೆ, ಡಾ.ಸುನೀಲಕುಮಾರ ಎನ್.ಎಂ. ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಸಾವಯವ ಮತ್ತು ಸಿರಿಧಾನ್ಯ ಪ್ರದರ್ಶನ, ಕೃಷಿ ಪರಿಕರ ಪ್ರದರ್ಶನ, ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಆರೋಗ್ಯವರ್ಧನೆಯಲ್ಲಿ ಸಿರಿಧಾನ್ಯಗಳ ಮಹತ್ವದ ಕುರಿತು ತಜ್ಞರಿಂದ ವಿಚಾರ ವಿನಿಮಯ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದರಿಂದ ಜಿಲ್ಲೆಯ ಎಲ್ಲಾ ತಾಲ್ಲೂಕಿನ ರೈತರು ಸಾವಯವ ಮತ್ತು ಸಿರಿಧಾನ್ಯ ಮೇಳದಲ್ಲಿ ಭಾಗವಹಿಸಿ ಅದರ ಸದುಪಯೋಗ ಪಡೆದು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.